ADVERTISEMENT

LS polls | ಕಾಶ್ಮೀರದಲ್ಲಿ ₹95 ಕೋಟಿ ಮೌಲ್ಯದ ಮದ್ಯ, ಮಾದಕ ವಸ್ತು ವಶ

ಪಿಟಿಐ
Published 26 ಮೇ 2024, 14:06 IST
Last Updated 26 ಮೇ 2024, 14:06 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶ್ರೀನಗರ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದಂದಿನಿಂದ ಇದುವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಗದು ಸೇರಿದಂತೆ ಒಟ್ಟು ₹95 ಕೋಟಿ ಮೌಲ್ಯದ ಮದ್ಯ, ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಅನಂತನಾಗ್‌– ರಜೌರಿ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಮತದಾನ ನಡೆಯುವುದರೊಂದಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ಪೂರ್ಣಗೊಂಡಿದೆ.

ADVERTISEMENT

ಕೆಲವು ಅಭ್ಯರ್ಥಿಗಳು ಮತದಾರರಿಗೆ ಹಣ, ಮದ್ಯ ಮತ್ತು ಇತರ ವಸ್ತುಗಳನ್ನು ಹಂಚಲು ಪ್ರಯತ್ನಿಸಿದ್ದರು. ಇವುಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು, ಆದಾಯ ತೆರಿಗೆ, ಅಬಕಾರಿ ದಳ ಮತ್ತು ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ಅಧಿಕಾರಿಗಳು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.