ನವದೆಹಲಿ: ತನ್ನ ಬ್ಯಾಂಕ್ ಖಾತೆಗಳ ಬಳಕೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಗುರುವಾರ ಮತ್ತೆ ಆಗ್ರಹಿಸಿದೆ. ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಪಕ್ಷಗಳಿಗೂ ಸಮಾನ ಅವಕಾಶಗಳನ್ನು ಒದಗಿಸಬೇಕು ಎಂದು ಹೇಳಿದೆ.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸೋನಿಯಾ ಗಾಂಧಿ, ‘ಕಾಂಗ್ರೆಸ್ ಪಕ್ಷವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ’ ಎಂದು ಆರೋಪಿಸಿದರು.
‘ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಈ ಕ್ರಮವು ಕಾಂಗ್ರೆಸ್ ಪಕ್ಷದ ಮೇಲಷ್ಟೆ ಅಲ್ಲ, ಭಾರತದ ಪ್ರಜಾತಂತ್ರ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರಿದೆ’ ಎಂದು ಹೇಳಿದರು.
‘ನಾವು ಈ ದಿನ ಪ್ರಸ್ತಾಪಿಸಿರುವ ವಿಷಯ ಬಹಳ ಗಂಭೀರವಾದುದು. ಕೇಂದ್ರ ಸರ್ಕಾರದ ಈ ನಡೆ ಕಾಂಗ್ರೆಸ್ ಪಕ್ಷವನ್ನು ಮಾತ್ರವಲ್ಲ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಬಲವಾದ ಪೆಟ್ಟು ನೀಡಲಿದೆ’ ಎಂದರು.
ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹಾಗೂ ಎಐಸಿಸಿ ಖಜಾಂಚಿ ಅಜಯ್ ಮಾಕನ್ ಸಹ ಇದ್ದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ‘ಚುನಾವಣೆಯಲ್ಲಿ ಹೋರಾಟ ನಡೆಸುವ ನಮ್ಮ ಸಾಮರ್ಥ್ಯವನ್ನೇ ನಾಶ ಮಾಡಲಾಗಿದೆ. ನಾವು ಚುನಾವಣಾ ಪ್ರಚಾರ ಕಾರ್ಯ ಮಾಡುವ ಶಕ್ತಿ ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.
ಆದಾಯ ತೆರಿಗೆ ಬಾಕಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ.
‘ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿ, ಅದರಿಂದ ₹115.32 ಕೋಟಿಯಷ್ಟು ಮೊತ್ತವನ್ನು ಒತ್ತಾಯದಿಂದ ಪಡೆದುಕೊಂಡಿರುವ ಬಿಜೆಪಿ, ಆ ಮೂಲಕ ಸಾಮಾನ್ಯ ಜನರು ಕಾಂಗ್ರೆಸ್‌ಗೆ ನೀಡಿದ್ದ ದೇಣಿಗೆಗಳನ್ನು ಲೂಟಿ ಮಾಡಿದೆ’ ಎಂದು ಮಾಕನ್ ಆರೋಪಿಸಿದರು.
ಭಾರತದಲ್ಲಿ ಈಗ ಪ್ರಜಾಪ್ರಭುತ್ವವೇ ಇಲ್ಲ. ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬುದು ಸಂಪೂರ್ಣ ಸುಳ್ಳುರಾಹುಲ್ ಗಾಂಧಿ ಕಾಂಗ್ರೆಸ್ ನಾಯಕ
ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಾಗಿ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಬಳಕೆ ಮಾಡುವುದಕ್ಕೆ ಸಾಂವಿಧಾನಿಕ ಸಂಸ್ಥೆಗಳು ಅವಕಾಶ ನೀಡಬೇಕುಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.