ನವದೆಹಲಿ: ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಮೂರು ದಿನ ಬಾಕಿ ಇರುವ ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಯಾರು ಎನ್ನುವುದು ಗುಟ್ಟಾಗಿದ್ದು, ಕುತೂಹಲ ತೀವ್ರಗೊಂಡಿದೆ.
ನಿನ್ನೆ ನಾಲ್ಕು ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ಹಿರಿಯ ನಾಯಕ ರಾಜ್ ಬಬ್ಬರ್ ಅವರು ಗುರುಗ್ರಾಮ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಕಾಂಗ್ರಾ ಕ್ಷೇತ್ರದಿಂದ, ಮಾಜಿ ಶಾಸಕ ಸತ್ಪಾಲ್ ರಾಯ್‌ಜಾದಾ ಅವರು ಹಮೀರ್‌ಪುರ್ ಲೋಕಸಭಾ ಕ್ಷೇತ್ರದಿಂದ, ಭೂಷಣ್ ಪಾಟೀಲ್ ಮುಂಬೈ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ.
ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ರಾಹುಲ್ ಗಾಂಧಿ ಕುಟುಂಬದವರು ಸ್ಪರ್ಧೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಎರಡು ಕ್ಷೇತ್ರಗಳಿಗೂ ಗಾಂಧಿ ಕುಟುಂಬದವರೇ ಸ್ಪರ್ಧೆ ಮಾಡಬೇಕು ಎಂದು ಉತ್ತರಪ್ರದೇಶ ಕಾಂಗ್ರೆಸ್ ಹೇಳಿದೆ.
ಬಲ್ಲ ಮೂಲಗಳ ಪ್ರಕಾರ, ಅಮೇಠಿಯಿಂದ ಪ್ರಿಯಾಂಕ ಗಾಂಧಿ ಪತಿ ರಾಬರ್ಟ್ ವಾದ್ರಾ ಹಾಗೂ ರಾಯ್‌ಬರೇಲಿ ಕೇತ್ರದಿಂದ ಪ್ರಿಯಾಂಕ ಅಥವಾ ರಾಹುಲ್ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.