ADVERTISEMENT

ಅನಧಿಕೃತ ರಾಜಕೀಯ ಜಾಹೀರಾತು ಫಲಕ ತೆರವುಗೊಳಿಸದ ರಾಜ್ಯಗಳಿಗೆ ಚುನಾವಣಾ ಆಯೋಗ ಚಾಟಿ

ಪಿಟಿಐ
Published 20 ಮಾರ್ಚ್ 2024, 15:11 IST
Last Updated 20 ಮಾರ್ಚ್ 2024, 15:11 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಸರ್ಕಾರ, ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಲ್ಲಿ ಅನಧಿಕೃತವಾಗಿ ಅಳವಡಿಸಲಾದ ರಾಜಕೀಯ ಜಾಹೀರಾತುಗಳನ್ನು 24 ಗಂಟೆಯೊಳಗೆ ತೆರವುಗೊಳಿಸಿ ವರದಿ ಸಲ್ಲಿಸುವಂತೆ ಚುಣಾವಣಾ ಆಯೋಗವು ರಾಜ್ಯ ಸರ್ಕಾರಗಳಿಗೆ ಚಾಟಿ ಬೀಸಿದೆ.

ಲೋಕಸಭಾ ಚುನಾವಣೆ ಘೋಷಣೆಯಾದ ಮಾರ್ಚ್‌ 16ರಿಂದಲೇ ಜಾರಿಗೆ ಬಂದ ಮಾದರಿ ನೀತಿ ಸಂಹಿತೆ ಅನ್ವಯ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಕೇಂದ್ರ ಸಂಪುಟ ಕಾರ್ಯದರ್ಶಿ, ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿತ್ತು. ಆದರೆ ಈವರೆಗೂ ತೆರವುಗೊಳಿಸಿರಲಿಲ್ಲ. ಈ ಕುರಿತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. 

ADVERTISEMENT

‘ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಅನಧಿಕೃತ ರಾಜಕೀಯ ಜಾಹೀರಾತುಗಳಲ್ಲಿ ಗೋಡೆ ಬರಹ, ಪೋಸ್ಟರ್‌ಗಳು, ವಿರೂಪಗೊಳಿಸಿದ ಯಾವುದೇ ಪೋಸ್ಟರ್‌ಗಳು, ಕಟೌಟ್‌, ಹೋರ್ಡಿಂಗ್ಸ್‌, ಬ್ಯಾನರ್‌ ಫ್ಲಾಗ್‌ಗಳನ್ನು ಕೂಡಲೇ ತೆರವುಗೊಳಿಸಬೇಕು. ವಿಮಾನ, ರೈಲ್ವೇ ಹಾಗೂ ಬಸ್ ನಿಲ್ದಾಣಗಳು, ರೈಲ್ವೇ ಸೇತುವೆಗಳು, ಹೆದ್ದಾರಿಗಳು, ಸರ್ಕಾರಿ ಬಸ್ಸುಗಳು, ವಿದ್ಯುತ್ ಹಾಗೂ ದೂರವಾಣಿ ಕಂಬಗಳು, ಸ್ಥಳೀಯ ಸಂಸ್ಥೆಗಳ ಕಟ್ಟಡಗಳ ಮೇಲೆ ಹಾಕಲಾಗಿದ್ದ ಇಂಥ ಜಾಹೀರಾತುಗಳನ್ನು ತೆರವುಗೊಳಿಸಿ’ ಎಂದು ಖಡಕ್ ಸೂಚನೆ ನೀಡಿದೆ.

ನೀಡಿದ ಸೂಚನೆಯಂತೆ ಪಾಲಿಸದ ರಾಜ್ಯಗಳ ನಿಷ್ಕಾಳಜಿಯನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು, ‘ಕೂಡಲೇ ಇವುಗಳನ್ನು ತೆರವುಗೊಳಿಸಿ, 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ’ ಸೂಚನೆ ನೀಡಿದೆ.

ಜಾಹೀರಾತುಗಳನ್ನು ತೆರವುಗೊಳಿಸಿದ ವರದಿಯು ಗುರುವಾರ ಸಂಜೆ 5ರೊಳಗೆ ಆಯೋಗದ ಕಚೇರಿ ತಲುಪಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.