ADVERTISEMENT

ಮಮತಾ ಕುರಿತ ‘ಅನುಚಿತ’ ಹೇಳಿಕೆ: ಬಿಜೆಪಿಯ ಗಂಗೋಪಾಧ್ಯಾಯಗೆ ನೋಟಿಸ್

ಪಿಟಿಐ
Published 17 ಮೇ 2024, 16:03 IST
Last Updated 17 ಮೇ 2024, 16:03 IST
<div class="paragraphs"><p>ಅಭಿಜಿತ್‌ ಗಂಗೋಪಾಧ್ಯಾಯ</p></div>

ಅಭಿಜಿತ್‌ ಗಂಗೋಪಾಧ್ಯಾಯ

   

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ‘ಅನುಚಿತ, ವಿವೇಚನೆ ಇಲ್ಲದ ಹಾಗೂ ಅಗೌರವ’ದ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಭಿಜಿತ್‌ ಗಂಗೋಪಾಧ್ಯಾಯ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

ಮೇ 20ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಆಯೋಗ ಸೂಚಿಸಿದೆ. 

ADVERTISEMENT

ಕಲ್ಕತ್ತ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾಗಿರುವ ಗಂಗೋಪಾಧ್ಯಾಯ ಅವರು ತಮ್ಲುಕ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಮೇ 25ರಂದು ಈ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.

ಪ್ರಸಕ್ತ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಮಹಿಳೆಯರ ಕುರಿತು ಅಗೌರವದ ಹೇಳಿಕೆಗಳನ್ನು ನೀಡಿರುವುದಕ್ಕೆ ಸಂಬಂಧಿಸಿ ಗಂಗೋಪಾಧ್ಯಾಯ ಅವರು ಚುನಾವಣಾ ಆಯೋಗದಿಂದ ನೋಟಿಸ್‌ ಪಡೆದ ನಾಲ್ಕನೇ ರಾಜಕಾರಣಿ ಆಗಿದ್ದಾರೆ.

ಈ ಮೊದಲು, ಬಿಜೆಪಿಯ ದಿಲೀಪ್‌ ಘೋಷ್‌, ಕಾಂಗ್ರೆಸ್‌ನ ಸುಪ್ರಿಯಾ ಶ್ರೀನೇತ್ ಅವರಿಗೆ ನೋಟಿಸ್‌ ನೀಡಲಾಗಿತ್ತು. ಇವರು ಕ್ರಮವಾಗಿ ಮಮತಾ ಬ್ಯಾನರ್ಜಿ ಹಾಗೂ ಕಂಗನಾ ರನೌತ್‌ ವಿರುದ್ಧ ನೀಡಿದ್ದ ಹೇಳಿಕೆಗಾಗಿ ನೋಟಿಸ್‌ ನೀಡಲಾಗಿತ್ತು.

ಬಿಜೆಪಿ ಅಭ್ಯರ್ಥಿ ಹೇಮಾಮಾಲಿನಿ ಕುರಿತ ಹೇಳಿಕೆಗೆ ಸಂಬಂಧಿಸಿ, ಕಾಂಗ್ರೆಸ್‌ನ ರಣದೀಪ್‌ ಸುರ್ಜೇವಾಲಾ ಅವರಿಗೆ ನೋಟಿಸ್‌ ನೀಡಿದ್ದ ಆಯೋಗ, ಅವರು 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.