ರಾಂಚಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ, ಈ ಭಾಗದ ಪ್ರತಿಯೊಂದು ಇಂಚು ಭಾರತಕ್ಕೆ ಸೇರಿದ್ದು, ಅದನ್ನು ಯಾವುದೇ ಶಕ್ತಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಜಾರ್ಖಂಡ್‌ನಲ್ಲಿ ನಡೆದ ಚುನಾವಣೆ ರ್‍ಯಾಲಿಯಲ್ಲಿ ಭಾಗವಹಿಸಿದ್ದ ಅವರು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ ಮಾತನಾಡಿದರು.
ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇರುವುದರಿಂದ ಅದನ್ನು ಗೌರವಿಸುವಂತೆ ಹೇಳುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟದ ನಾಯಕ ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇರುವುದರಿಂದ ಪಿಒಕೆ ಬಗ್ಗೆ ಮಾತನಾಡಬೇಡಿ ಎಂದು ಹೇಳಿದ್ದರು. ಆದರೆ ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.
ಕಾಂಗ್ರೆಸ್‌ಗೆ ಏನಾಗಿದೆ ಎಂಬುದೇ ಗೊತ್ತಾಗುತ್ತಿಲ್ಲ, ಪಿಒಕೆ ಭಾರತದ ಭಾಗ ಎಂದು ಸಂಸತ್ತಿನಲ್ಲಿ ಸರ್ವಾನುಮತದಿಂದ ಕಾಂಗ್ರೆಸ್ ಹೇಳುತ್ತದೆ. ಆದರೆ ಪಾಕ್ ಬಳಿ ಪರಮಾಣು ಬಾಂಬ್ ಇದೆ ಎಂದು ಮಾತನಾಡುವ ಮೂಲಕ ಪಿಒಕೆ ಮೇಲೆ ಪ್ರಶ್ನಾರ್ಥಕ ಚಿಹ್ನೆ ಹಾಕುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
ಪಾಕ್ ಆಕ್ರಮಿತ ಕಾಶ್ಮೀರದ ಪ್ರತಿಯೊಂದು ಇಂಚು ಭಾರತಕ್ಕೆ ಸೇರಿದ್ದು, ಅದು ಭಾರತದಲ್ಲೇ ಉಳಿಯುತ್ತದೆ ಎಂಬುದು ಬಿಜೆಪಿಯ ಸ್ಪಷ್ಟ ನಿಲುವು ಎಂದು ಅಮಿತ್ ಶಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.