ADVERTISEMENT

ಅನಾರೋಗ್ಯ ಕಾರಣ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ: ಎಚ್‌ಡಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜೂನ್ 2024, 10:08 IST
Last Updated 9 ಜೂನ್ 2024, 10:08 IST
<div class="paragraphs"><p>ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು&nbsp; &nbsp; ನರೇಂದ್ರ ಮೋದಿ </p></div>

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು    ನರೇಂದ್ರ ಮೋದಿ

   

ಬೆಂಗಳೂರು: ಆರೋಗ್ಯ ಹದಗೆಟ್ಟಿರುವ ಕಾರಣ ನಾನು ಇಂದು ಸಂಜೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ತಿಳಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರವೇ ಭಾರತಕ್ಕೆ ಬಂದಿಳಿದಿದ್ದಾರೆ. ಅವರಲ್ಲದೆ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೆರಿಂಗ್ ಟೋಬಗೆ, ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಮಾರಿಷಸ್‌ ಪ್ರಧಾನಿ ಪ್ರವಿಂದ ಕುಮಾರ್ ಜಗನ್ನಾಥ್ ಸೇರಿ ಹಲವು ರಾಷ್ಟ್ರಗಳ ಗಣ್ಯರು ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಅತಿಥಿಗಳು ಭಾಗವಹಿಸಲಿದ್ದಾರೆ. ಎನ್‌ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30 ಮಂದಿ ಸೇರ್ಪಡೆಯಾಗಲಿದ್ದಾರೆ. ಮೊದಲ ಹಂತದಲ್ಲಿ ಮಿತ್ರ ಪಕ್ಷಗಳ 12ರಿಂದ 15 ಸದಸ್ಯರು ಸಂಪುಟಕ್ಕೆ ಸೇರುವ ಸಂಭವ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.