ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರನೌತ್ ಅವರ ಚುನಾವಣಾ ರ್ಯಾಲಿಗೆ ಲಾಹೌಲ್ ಮತ್ತು ಸ್ಪಿತಿಯಲ್ಲಿ ತಡೆಯೊಡ್ಡಿರುವ ಆರೋಪದ ಮೇಲೆ ಅಪರಿಚಿತರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಯುವ ಕಾಂಗ್ರೆಸ್ ಪದಾಧಿಕಾರಿಗಳ ವಿರುದ್ಧ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
ಕಂಗನಾ ಅವರ ರ್ಯಾಲಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯರು ತಡೆದು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ಅರೋಪಿಸಿದೆ.
ಕಾಂಗ್ರೆಸ್ ಕಾರ್ಯಕರ್ತರು ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.