ವಯನಾಡ್: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂಬುದು ಕುತೂಹಲವೆನಿಸಿದೆ.
ವಯನಾಡ್ ಹಾಗೂ ರಾಯ್‌ಬರೇಲಿ ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎರಡೂ ಕ್ಷೇತ್ರಗಳ ಜನರು ಹೃದಯಕ್ಕೆ ಹತ್ತಿರವಾಗಿರುವುದರಿಂದ ಯಾವ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, 'ನಾನು ಎರಡೂ ಕ್ಷೇತ್ರಗಳ ಸಂಸದನಾಗಿ ಇರಲು ಬಯಸುತ್ತೇನೆ. ನಿಮಗೆಲ್ಲರಿಗೂ ಅಭಿನಂದನೆಗಳು' ಎಂದು ಹೇಳಿದ್ದಾರೆ.
'ನಾನು ಎರಡೂ ಕ್ಷೇತ್ರದಿಂದಲೂ ಗೆದ್ದಿದ್ದೇನೆ. ರಾಯ್‌ಬರೇಲಿ ಹಾಗೂ ವಯನಾಡ್ ಕ್ಷೇತ್ರದ ಮತದಾರರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಈಗ ನಾನು ಯಾವ ಕ್ಷೇತ್ರದಲ್ಲಿ ಉಳಿಯುತ್ತೇನೆ ಎಂದು ನಿರ್ಧರಿಸಬೇಕಿದೆ. ಈ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಎರಡೂ ಸ್ಥಾನದಲ್ಲಿರಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
2019ರಲ್ಲಿ ಅಮೇಠಿಯಲ್ಲಿ ಸೋಲು ಅನುಭವಿಸಿದ್ದ ರಾಹುಲ್ ಅವರನ್ನು ವಯನಾಡ್ ಕ್ಷೇತ್ರ ಕೈಹಿಡಿದಿತ್ತು. ಈಗ ಎರಡನೇ ಬಾರಿಯೂ ವಯನಾಡ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, 3.64 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ತಾಯಿ ಸೋನಿಯಾ ಗಾಂಧಿ ಅವರು ಬಿಟ್ಟುಕೊಟ್ಟಿದ್ದ ರಾಯ್‌ಬರೇಲಿ ಕ್ಷೇತ್ರದಿಂದಲೂ ಈ ಬಾರಿ ಸ್ಪರ್ಧಿಸಿದ್ದ ರಾಹುಲ್ ಅಭೂತಪೂರ್ವ ಗೆಲುವು ಗಳಿಸಿದ್ದಾರೆ. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿಗೂ ಉತ್ತಮ ಸಾಧನೆ ಮಾಡಿರುವ ರಾಹುಲ್, 3.90 ಲಕ್ಷಕ್ಕೂ ಅಧಿಕ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.