ಕಮಲಾಪುರ: ‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ರಾಮಮಂದಿರ ಉದ್ಘಾಟನೆಗೆ ಏಕೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಹೋಗಿದ್ದರೆ ನಾನು ಹೊರಬರುತ್ತಿದ್ದಂತೆ ಪೂರ್ತಿ ಮಂದಿರವನ್ನು ಗಂಗಾ ಜಲದಿಂದ ಶುದ್ಧಿಗೊಳಿಸುತ್ತಿದ್ದರು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ರಾಮಮಂದಿರ ವಿಷಯವನ್ನು ಚುನಾವಣೆಗೆ ಬಳಸುತ್ತಿರುವ ನರೇಂದ್ರ ಮೋದಿ ಕಾಂಗ್ರೆಸ್‌ಗೆ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿದ್ದಾರೆ. ಒಂದು ವೇಳೆ ಅವರು ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವವರಾಗಿದ್ದರೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ರಾಮ ಮಂದಿರ ಉದ್ಘಾಟನೆಗೆ ಏಕೆ ಕರೆಯಲಿಲ್ಲ? ಸಾಂವಿಧಾನಿಕವಾಗಿ ನಿಮಗಿಂತ ದೊಡ್ಡ ಸ್ಥಾನದಲ್ಲಿದ್ದ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದವರೆಂಬ ತಾರತಮ್ಯದಿಂದ ಕರೆಯಲಿಲ್ಲವೇ ಎಂಬ ಪ್ರಶ್ನೆಗೆ ಮೊದಲು ಉತ್ತರಿಸಿ. ನಂತರ ನಾನು ಯಾಕೆ ಬರಲಿಲ್ಲ ಎಂಬುದನ್ನು ಹೇಳುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.