ADVERTISEMENT

ಮಧ್ಯಪ್ರದೇಶದ ಕಾಂಗ್ರೆಸ್‌ ನಾಯಕ, ಕಮಲ್‌ನಾಥ್‌ ಆಪ್ತ ದೀಪಕ್ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 3:11 IST
Last Updated 6 ಏಪ್ರಿಲ್ 2024, 3:11 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ದೀಪಕ್ ಸಕ್ಸೇನಾ ಮತ್ತು ಅವರ ಬೆಂಬಲಿಗರು ಶುಕ್ರವಾರ ರಾತ್ರಿ ಬಿಜೆಪಿ ಸೇರಿದ್ದಾರೆ.

ದೀಪಕ್‌ ಸಕ್ಷೇನಾ ಅವರು ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಅವರ ಆಪ್ತರಾಗಿದ್ದಾರೆ. ದೀಪಕ್ ಛಿಂದ್ವಾರಾ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿದ್ದಾರೆ.

ADVERTISEMENT

ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ದೀಪಕ್‌, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮೋಹನ್ ಯಾದವ್‌, ರಾಜ್ಯ ಬಿಜೆಪಿ ಮುಖ್ಯಸ್ಥ ವಿ.ಡಿ.ಶರ್ಮಾ ಅವರ ಕಾರ್ಯಗಳಿಂದ ಪ್ರಭಾವಿತರಾಗಿ ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದರು.

ಕೆಲವು ದಿನಗಳ ಹಿಂದೆ ದೀಪಕ್‌ ಅವರ ‍ಪುತ್ರ ಅಜಯ್‌ ಸಕ್ಸೇನಾ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಈ ವೇಳೆ ಅವರು ಕಾಂಗ್ರೆಸ್‌ ಪಕ್ಷದಲ್ಲಿ ನನ್ನ ತಂದೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.