ADVERTISEMENT

Karnataka Lok Sabha Results 2024 ಬಿಜೆಪಿ- 17, ಕಾಂಗ್ರೆಸ್-09, ಜೆಡಿಎಸ್-02

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2024, 9:20 IST
Last Updated 5 ಜೂನ್ 2024, 9:20 IST
   

ಲೋಕಸಭೆ ಚುನಾವಣೆ 2024: ಕರ್ನಾಟಕದಲ್ಲಿ ಅಂತಿಮ ಫಲಿತಾಂಶ

ಒಟ್ಟು: 28

ಬಿಜೆಪಿ: 17

ಜೆಡಿಎಸ್: 2

ADVERTISEMENT

ಕಾಂಗ್ರೆಸ್: 9

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳ ಕುತೂಹಲಕ್ಕೆ ಇಂದು ತೆರೆ ಬಿತ್ತು. ಚುನಾವಣಾ ಆಯೋಗದ ತಾಜಾ ಮಾಹಿತಿ ಪ್ರಕಾರ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಜಯ ಸಾದಿಸಿವೆ.

ಮುಖ್ಯಾಂಶಗಳು:

ಚಿಕ್ಕೋಡಿ: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಈ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮೊದಲ ಯತ್ನದಲ್ಲೇ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ 90,834 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಗೆಲುವು

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರು ಬಿಜೆಪಿಯ ಬಿ.ಶ್ರೀರಾಮುಲು ವಿರುದ್ಧ 98,992 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು 10 ಅಭ್ಯರ್ಥಿಗಳ ಪೈಕಿ 3ನೇ ಸ್ಥಾನವನ್ನು ‘ನೋಟಾ’ ಪಡೆದಿರುವುದು ವಿಶೇಷವಾಗಿದೆ. ‘ನೋಟಾ‘ಕ್ಕೆ 7,889 ಮತಗಳು ಚಲಾವಣೆಯಾಗಿವೆ. ಕಣದಲ್ಲಿ ಬಿಎಸ್‌ಪಿ, ಕೆಆರ್‌ಎಸ್‌,ಎಸ್‌ಯುಸಿಐ, ಪ್ರಹಾರ್‌ ಜನಶಕ್ತಿ ಪಾರ್ಟಿ, ನವಭಾರತ ಸೇನಾ ಪಕ್ಷಗಳ ಅಭ್ಯರ್ಥಿಗಳು ಹಾಗೂ ಮೂವರು ಪಕ್ಷೇತರರು ಇದ್ದರು. ಎಲ್ಲರೂ ಠೇವಣಿ ಕಳೆದುಕೊಂಡಿದ್ದಾರೆ.

ತುಮಕೂರು: ವಿ.ಸೋಮಣ್ಣ ಗೆಲುವು

ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 1,73,645 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಸೋಮಣ್ಣ 7,16,709 ಮತ, ಕಾಂಗ್ರೆಸ್‌ನ ಎಸ್.ಪಿ.ಮುದ್ದಹನುಮೇಗೌಡ 5,43,084 ಮತ ಪಡೆದಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಭರ್ಜರಿ ಗೆಲುವು

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ವಿರುದ್ಧ 2.68 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಂಜುನಾಥ್ ಅವರು 10,79,002 ಮತಗಳನ್ನು ಪಡೆದು ಜಯದ ನಗೆ ಬೀರಿದರೆ, ಸುರೇಶ್ ಅವರು 8,09,355 ಮತಗಳನ್ನು ಪಡೆದು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

ಮಂಡ್ಯ: ಕುಮಾರಸ್ವಾಮಿ ಗೆಲುವು

ಲೋಕಸಭಾ ಚುನಾವಣೆ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು 2,84,629 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮೈಸೂರು- ಕೊಡಗು‌ ಲೋಕಸಭಾ ‌ಕ್ಷೇತ್ರ: ಮೊದಲ ಪ್ರಯತ್ನದಲ್ಲೇ ಯದುವೀರ್‌ಗೆ ಭರ್ಜರಿ ಜಯ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಎನ್‌ಡಿಎ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ‌ಒಡೆಯರ್ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ. ಮತ ಎಣಿಕೆ ನಡೆಯುತ್ತಿದ್ದು, ಯದುವೀರ್ ಸದ್ಯ 7,05,307 ಮತಗಳನ್ನು ಗಳಿಸಿ 1,108,17 ಮತಗಳ ಭಾರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ದಕ್ಷಿಣ ಕನ್ನಡ:

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ 1,49,208 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ದಾವಣಗೆರೆ:

19ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ 26094 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ:

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಅವರು ದಾಖಲೆತ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ಧಾರವಾಡ:

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಗೆಲುವು ದಾಖಲಿಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ:

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ಗೆಲುವಿನ ನಗೆ ಬೀರಿದರು.

ವಿಜಯಪುರ ಲೋಕಸಭಾ ಕ್ಷೇತ್ರ:

ವಿಜಯಪುರ ಎಸ್‌.ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಸತತ ಏಳನೇ ಬಾರಿಗೆ ಜಯ ಗಳಿಸುವ ಮೂಲಕ ಸಂಸತ್‌ ಪ್ರವೇಶಿಸಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ: ಬಿಜೆಪಿಯ ಗೋವಿಂದ ಕಾರಜೋಳ ಜಯಭೇರಿ

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಜಯಭೇರಿ ಭಾರಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ವಿರುದ್ಧ 2,57,178 ಮತಗಳ ಅಂತರದಿಂದ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ‌.

ಬೀದರ್‌ ಲೋಕಸಭಾ ಕ್ಷೇತ್ರ:

ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರು ಜಯ ಗಳಿಸಿದ್ದಾರೆ. ಈ ಗೆಲುವಿನ ಮೂಲಕ ಸಾಗರ್‌ ಖಂಡ್ರೆಯವರು (26) ಸಂಸತ್ತು ಪ್ರವೇಶಿಸಲಿರುವ ಅತಿ ಕಿರಿಯ ವಯಸ್ಸಿನ ಸಂಸದನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಚಿಕ್ಕಬಳ್ಳಾಪುರ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ. 

ಬೆಳಗಾವಿ: ಜಗದೀಶ್ ಶೆಟ್ಟರ್ ಗೆಲುವು

ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ದಾಖಲಿಸಿದ್ದಾರೆ

ಶಿವಮೊಗ್ಗ: ಬಿ.ವೈ.ರಾಘವೇಂದ್ರ ಗೆಲುವು

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 2,24,404 ಮತಗಳ ಭಾರೀ ಅಂತರದ ಮುನ್ನಡೆ ಸಾಧಿಸಿದ್ದು, ಭರ್ಜರಿ ಗೆಲುವಿನ ಹಾದಿಯಲ್ಲಿದ್ದಾರೆ.

ಕೋಲಾರ ಮೀಸಲು ಲೋಕಸಭೆ ಕ್ಷೇತ್ರ: ಮಲ್ಲೇಶ್‌ ಬಾಬು ಗೆಲುವು

ಜೆಡಿಎಸ್‌‌ನ ಎಂ.ಮಲ್ಲೇಶ್‌ ಬಾಬು ಅವರು ಗೆಲುವು ದಾಖಲಿಸಿದ್ದಾರೆ

***

ತುಮಕೂರು:

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 1,73,645 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸೋಮಣ್ಣ 7,16,709 ಮತ, ಕಾಂಗ್ರೆಸ್‌ನ ಎಸ್.ಪಿ.ಮುದ್ದಹನುಮೇಗೌಡ 5,43,084 ಮತ ಪಡೆದಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರ: ಬಸವರಾಜ ಬೊಮ್ಮಾಯಿಗೆ ಗೆಲುವು 

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 41,998 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರ:

ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಹುತೇಕ ಕೊನೆಗೊಂಡಿದ್ದು, ಅಂಚೆ ಮತಗಳ ಎಣಿಕೆ ಇದೀಗ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಈಗಾಗಲೇ ಗೆಲುವು ದಾಖಲಿಸಿದ್ದು, ಘೋಷಣೆಯಷ್ಟೇ ಬಾಕಿ ಉಳಿದಿದೆ.

ಕೊಪ್ಪಳ ಕ್ಷೇತ್ರ:

ಹಾವು ಏಣಿಯಾಟದ ಸ್ಪರ್ಧೆ ಮೂಲಕ ಗಮನ ಸೆಳೆದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವು ಪಡೆದು ಸಂಸದರಾಗಿ ಆಯ್ಕೆಯಾಗಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಬೀದರ್‌ ಲೋಕಸಭಾ ಕ್ಷೇತ್ರ:

ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರು ಜಯ ಗಳಿಸಿದ್ದಾರೆ. ಈ ಗೆಲುವಿನ ಮೂಲಕ ಸಾಗರ್‌ ಖಂಡ್ರೆಯವರು (26) ಸಂಸತ್ತು ಪ್ರವೇಶಿಸಲಿರುವ ಅತಿ ಕಿರಿಯ ವಯಸ್ಸಿನ ಸಂಸದನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಚಿಕ್ಕಬಳ್ಳಾಪುರ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ. 

ಸುರಪುರ ವಿಧಾನಸಭೆ ಉಪ ಚುನಾವಣೆ:

ಆರನೇ ಸುತ್ತು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲಗೆ 14,407 ಮತಗಳ ಮುನ್ನಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.