ಪಾಲಕ್ಕಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕೇರಳದ ಎಲ್‌ಡಿಎಫ್ ಶಾಸಕ ಪಿ.ವಿ.ಅನ್ವರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
'ರಾಹುಲ್ ಗಾಂಧಿ ನಾಲ್ಕನೇ ದರ್ಜೆಯ ನಾಗರಿಕನಾಗಿದ್ದು, ಅವರ ಡಿಎನ್‌ಎ ಪರೀಕ್ಷಿಸಬೇಕು' ಎಂದು ಅನ್ವರ್ ದ್ವೇಷಪೂರಿತ ಮಾತುಗಳನ್ನು ಆಡಿದ್ದರು ಎಂಬ ಆರೋಪವಿದೆ.
ಏಪ್ರಿಲ್ 26ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದಂತೆ ನಾಟ್ಟುಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್ವರ್ ವಿರುದ್ದ ಐಪಿಸಿ ಸೆಕ್ಷನ್ 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವುದು) ಮತ್ತು ಸೆಕ್ಷನ್ 125 (ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷ ಹರಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಏಪ್ರಿಲ್ 22ರಂದು ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅನ್ವರ್, ಕಾಂಗ್ರೆಸ್ ನಾಯಕನನ್ನು ಗಾಂಧಿ ಎಂಬ ಉಪನಾಮದಿಂದ ಸಂಭೋದಿಸುವ ಅಗತ್ಯವಿಲ್ಲ ಎಂದೂ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.