ADVERTISEMENT

10 ವರ್ಷದಲ್ಲಿ ಜಗತ್ತಿನ ಶ್ರಿಮಂತ ಪಕ್ಷವಾದ ಬಿಜೆಪಿ: ಪ್ರಿಯಾಂಕಾ ಗಾಂಧಿ

ಪಿಟಿಐ
Published 1 ಮೇ 2024, 14:20 IST
Last Updated 1 ಮೇ 2024, 14:20 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ಧುಬ್ರಿ: ಅಸ್ಸಾಂನಲ್ಲಿ ಮಾಫಿಯಾ ರಾಜ್ ಜಾರಿಯಲ್ಲಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

ಧುಬ್ರಿಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ತೆಲಂಗಾಣದಲ್ಲಿ ಬಿಜೆಪಿ ಮತ್ತು ಅಸಾದುದ್ದೀನ್ ಒವೈಸಿ ನಡುವೆ ಇರುವಂತೆ ಇಲ್ಲಿ ಎಐಯುಡಿಎಫ್ ಜತೆ ಗುಪ್ತ ಒಪ್ಪಂದ ಇದ್ದು, ಅವರ ಗುರಿ ಕಾಂಗ್ರೆಸ್ ಸೋಲಿಸುವುದಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಪ್ರಧಾನಿ ಮೋದಿ ಅವರು ಪ್ರಜ್ವಲ್ ರೇವಣ್ಣ ಪರವಾಗಿ ಮತ ಯಾಚನೆ ಮಾಡಿದರು ಮತ್ತು ವಿದೇಶಕ್ಕೆ ಪಲಾಯನ ಮಾಡುವುದನ್ನು ತಡೆಯಲಿಲ್ಲ’ ಎಂದು ಆರೋಪಿಸಿದರು.

ADVERTISEMENT

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಅವರು, ‘ಬಿಜೆಪಿಯು ಕೇವಲ 10 ವರ್ಷಗಳಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ ರಾಜಕೀಯ ಪಕ್ಷವಾಯಿತು. ಆದರೆ, ಕಾಂಗ್ರೆಸ್ 70 ವರ್ಷಗಳಲ್ಲಿ ಅಷ್ಟು ಗಳಿಸಲಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.