ಗುವಾಹಟಿ: ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 150 ವಿದ್ಯುನ್ಮಾನ ಮತಯಂತ್ರಗಳು (ಇವಿಎಂ), 400ಕ್ಕೂ ಹೆಚ್ಚು ವಿವಿಪ್ಯಾಟ್‌ಗಳನ್ನು (ಮತದಾನ ದೃಢೀಕರಣ ರಸೀದಿ ಯಂತ್ರ) ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು (ಶುಕ್ರವಾರ) ಬೆಳಿಗ್ಗೆ ಮತದಾನ ಆರಂಭವಾಗುವುದಕ್ಕೂ ಮುನ್ನ ಇವಿಎಂಗಳನ್ನು ಪರಿಶೀಲನೆ ನಡೆಸಲಾಯಿತು. ಈ ವೇಳೆ ತಾಂತ್ರಿಕ ದೋಷ ಕಂಡು ಬಂದ ಬೆನ್ನಲ್ಲೇ ಎಚ್ಚೆತ್ತ ಚುನಾವಣಾಧಿಕಾರಿಗಳು ಮತಯಂತ್ರಗಳು, ವಿವಿಪ್ಯಾಟ್‌ಗಳು ಸೇರಿದಂತೆ ವಿವಿಧ ಬ್ಯಾಲೆಟ್ ಯೂನಿಟ್‌ಗಳನ್ನು ಬದಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ.
ಯಾವ ಕ್ಷೇತ್ರದಲ್ಲಿ ಎಷ್ಟು ಇವಿಎಂಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು ಎಂಬುದರ ಕುರಿತು ಮಾಹಿತಿ ಹಂಚಿಕೊಳ್ಳಲು ಅಧಿಕಾರಿ ನಿರಾಕರಿಸಿದ್ದಾರೆ.
ಲಖಿಂಪುರದ ಬಿಹ್ಪುರಿಯ ಮೂರು ಮತಗಟ್ಟೆಗಳು ಹಾಗೂ ದಿಬ್ರುಗಢದ ನಹರ್ಕಟಿಯಾ, ಹೊಜೈ, ಕಲಿಯಾಬೋರ್ ಮತ್ತು ಬೊಕಾಖಾಟ್‌ನಲ್ಲಿ ತಲಾ ಒಂದು ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.