ಕೋಲ್ಕತ್ತ: ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ‘ಬಿಜೆಪಿಗೆ ಮತ ಚಲಾಯಿಸಿ’ ಎಂದು ಹೇಳಿರುವ ವಿಡಿಯೊವನ್ನು ತಿರುಚಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
‘ವಿಡಿಯೊದ ಒಂದು ಭಾಗವನ್ನು ತಿರುಚಿ, ಹರಡಲಾಗಿದೆ ಎಂಬುದನ್ನು ನಮ್ಮ ಸೈಬರ್ ತಂಡವು ಕಂಡುಕೊಂಡಿದೆ. ಚುನಾವಣಾ ಸಮಯದಲ್ಲಿ ರಾಜಕೀಯ ಲಾಭ ಪಡೆಯುವ ದೃಷ್ಟಿಯಿಂದ ಪ್ರಾಯಶಃ ಇದನ್ನು ಮಾಡಲಾಗಿದೆ. ಈ ಸಂಬಂಧ ನಾವು ಜಂಗೀಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ವಿಡಿಯೊ ಬಗ್ಗೆ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಅದು ತಿರುಚಿದ ವಿಡಿಯೊ ಎಂದು ತಿಳಿಸಿದ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಧನ್ಯವಾದ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.