ಧುಬ್ರಿ: ಅಸ್ಸಾಂನಲ್ಲಿ 'ಮಾಫಿಯಾ ರಾಜ್' ನಡೆಯುತ್ತಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅನೇಕ ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.
ಧುಬ್ರಿಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣದಲ್ಲಿ ಅಸಾದುದ್ದೀನ್ ಓವೈಸಿ ಅವರೊಂದಿಗೆ ಬಿಜೆಪಿ ಹೊಂದಿರುವಂತೆಯೇ ಕಾಂಗ್ರೆಸ್ ಅನ್ನು ಸೋಲಿಸಲು ಎಐಯುಡಿಎಫ್‌ನ ಬದ್ರುದ್ದೀನ್ ಅಜ್ಮಲ್ ಅವರೊಂದಿಗೆ ಅಸ್ಸಾಂ ಸಿಎಂ ರಹಸ್ಯ ಮೈತ್ರಿ ಹೊಂದಿದ್ದಾರೆ ಎಂದು ಟೀಕಿಸಿದ್ದಾರೆ.
ಹೆಚ್ಚುತ್ತಿರುವ ನಿರುದ್ಯೋಗವು ರಾಜ್ಯದ ಪ್ರಮುಖ ಸಮಸ್ಯೆಯಾಗಿದೆ. ಆದರೆ ಸಿಎಂ ಹಾಗೂ ಸಚಿವರು ತಮ್ಮ ಹಿತಾಸಕ್ತಿಗಳ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಅವರನ್ನು ದೇಶ ಬಿಟ್ಟು ಹೋಗುವುದನ್ನು ಏಕೆ ತಡೆಯಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾವಣಾ ಬಾಂಡ್ ಹಗರಣದಲ್ಲಿ ಬಿಜೆಪಿ ಭಾಗಿಯಾಗಿದೆ ಎಂದೂ ಅವರು ಆರೋಪಿಸಿದ್ದು, ಕೇವಲ 10 ವರ್ಷಗಳಲ್ಲಿ ಬಿಜೆಪಿ ವಿಶ್ವದ ಶ್ರೀಮಂತ ಪಕ್ಷವಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.