ADVERTISEMENT

LS polls | ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ ಅಭ್ಯರ್ಥಿಗಳು ಯಾರಾರು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮೇ 2024, 14:32 IST
Last Updated 28 ಮೇ 2024, 14:32 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

–ಪಿಟಿಐ ಚಿತ್ರ

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಣಕ್ಕಿಳಿದ್ದು, ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಗಮನ ಸೆಳೆದಿರುವ ಕ್ಷೇತ್ರವೆನಿಸಿದೆ.

ADVERTISEMENT

ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್‌ 1ರಂದು ನಡೆಯಲಿದೆ. ಅಂದೇ ವಾರಾಣಸಿಯಲ್ಲೂ ಮತದಾನ ನಡೆಯಲಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ ಅರವಿಂದ ಕೇಜ್ರಿವಾಲ್ ಸ್ಪರ್ಧಿಸಿದ್ದರು. ಕೇಜ್ರಿವಾಲ್ ಶೇ 20.03ರಷ್ಟು ಮತಗಳನ್ನು ಪಡೆದರೆ, ಮೋದಿ ಶೇ 56.37ರಷ್ಟು ಮತಗಳನ್ನು ಪಡೆದಿದ್ದರು.

2019 ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಲಿನಿ ಯಾದವ್ ವಿರುದ್ಧ ಮೋದಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದರು. ಶಾಲಿನಿ ಯಾದವ್ ಶೇ 18.4ರಷ್ಟು ಮತಗಳನ್ನು ಪಡೆದರೆ, ಮೋದಿ ಶೇ 63.62ರಷ್ಟು ಮತಗಳನ್ನು ಗಳಿಸಿದ್ದರು.

ಈ ಬಾರಿ ಮೋದಿ ವಿರುದ್ಧ ಸ್ಪರ್ಧಿಸಿರುವ ಆರು ಅಭ್ಯರ್ಥಿಗಳ ವಿವರ ಇಲ್ಲಿದೆ..

  • ವಾರಾಣಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ 53 ವರ್ಷದ ಅಜಯ್ ರೈ ಕಣಕ್ಕಿಳಿದಿದ್ದಾರೆ. 2014 ಮತ್ತು 2019ರಲ್ಲಿಯೂ ಸ್ಪರ್ಧಿಸಿ ಸೋತಿದ್ದರು. ರೈ ವಿರುದ್ಧ 18 ಪ್ರಕರಣಗಳು ದಾಖಲಾಗಿವೆ.

  • ಬಿಎಸ್‌ಪಿ ಅಭ್ಯರ್ಥಿಯಾಗಿ 70 ವರ್ಷದ ಅಥೆರ್ ಜಮಾಲ್ ಲಾರಿ ಅವರು ಕಣಕ್ಕಿಳಿದಿದ್ದಾರೆ. ಜಮಾಲ್ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ.

  • ಯುಗ ತುಳಸಿ ಪಕ್ಷದ ಅಭ್ಯರ್ಥಿಯಾಗಿ 46 ವರ್ಷ ಕೋಳಿಶೆಟ್ಟಿ ಶಿವಕುಮಾರ್ ಸ್ಪರ್ಧಿಸುತ್ತಿದ್ದಾರೆ. ಶಿವಕುಮಾರ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಕೇಂದ್ರ ಸರ್ಕಾರ ‘ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದ್ದರು.

  • ಅಪ್ನಾ ದಳದ ಅಭ್ಯರ್ಥಿ ಅಭ್ಯರ್ಥಿಯಾಗಿ 39 ವರ್ಷದ ಗಗನ್ ಪ್ರಕಾಶ್ ಯಾದವ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಗಗನ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ.

  • ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ 39 ವರ್ಷದ ದಿನೇಶ್ ಕುಮಾರ್ ಯಾದವ್ ಹಾಗೂ ಸಂಜಯ್ ಕುಮಾರ್ ತಿವಾರಿ ಕಣಕ್ಕಿಳಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.