ADVERTISEMENT

Lok Sabha Elections | ಕಿರುತೆರೆ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಮೇ 2024, 9:32 IST
Last Updated 1 ಮೇ 2024, 9:32 IST
   

ನವದೆಹಲಿ: ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಮತ್ತು ‘ಅನುಪಮಾ’ ಧಾರಾವಾಹಿ ಖ್ಯಾತಿಯ ಕಿರುತೆರೆ ನಟಿ ರೂಪಾಲಿ ಗಂಗೂಲಿ ಹಾಗೂ ಮಹಾರಾಷ್ಟ್ರದ ಜ್ಯೋತಿಷಿ ಅಮೇಯಾ ಜೋಶಿ ಅವರು ಇಂದು (ಬುಧವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ, ರಾಷ್ಟ್ರೀಯ ಮಾಧ್ಯಮ ವಿಭಾಗದ ಉಸ್ತುವಾರಿ ಅನಿಲ್ ಬಲುನಿ ಅವರು ರೂಪಾಲಿ ಗಂಗೂಲಿ ಹಾಗೂ ಅಮೇಯಾ ಜೋಶಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೂಪಾಲಿ, ‘ಎಲ್ಲರನ್ನೂ ಬಿಜೆಪಿಯತ್ತ ಆಕರ್ಷಿಸುವ ಏಕೈಕ ವ್ಯಕ್ತಿತ್ವ ಪ್ರಧಾನಿ ಮೋದಿ. ಅವರ ಕಾರ್ಯ ವೈಖರಿ ಮತ್ತು ನಮ್ಮ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ರೀತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಅಭಿವೃದ್ಧಿಯ ಈ ‘ಮಹಾಯಜ್ಞ’ವನ್ನು ನೋಡಿದಾಗ ನಾನು ಸಹ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ನನಗೆ ಅನಿಸಿತು. ಹಾಗಾಗಿ ಬಿಜೆಪಿಗೆ ಸೇರಿದ್ದೇನೆ’ ಎಂದು ಹೇಳಿದ್ದಾರೆ.

ADVERTISEMENT

ನಾನು ಸಹ ‘ಮೋದಿ ಸೇನೆ’ಗೆ ಸೇರ್ಪಡೆಯಾಗುವ ಮೂಲಕ ದೇಶಕ್ಕೆ ನನ್ನದೇ ಆದ ಕೊಡುಗೆ ನೀಡಲು ಬಯಸುತ್ತೇನೆ ಎಂದಿದ್ದಾರೆ.

ಲೋಕಸಭೆಯ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮೇ 7ರಂದು 3ನೇ ಹಂತದ ಮತದಾನ ನಡೆಯಲಿದೆ.

ದೇಶದಾದ್ಯಂತ ಮೊದಲ ಹಂತದಲ್ಲಿ ಶೇ 66.1ರಷ್ಟು ಹಾಗೂ ಎರಡನೇ ಹಂತದಲ್ಲಿ ಶೇ 66.7ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.