ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ ಜೋಷಿ ಅವರು ಮನೆಯಲ್ಲಿಯೇ ಮತದಾನ ಮಾಡಿದರು.
ಹಿರಿಯರಿಗೆ ಮತ್ತು ಅಂಗವಿಕಲರಿಗೆ ಮನೆಯಲ್ಲಿಯೇ ಮತದಾನ ಮಾಡಲು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ನೇತೃತ್ವದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೇ 24ರವರೆಗೂ ಈ ಸೌಲಭ್ಯ ಮುಂದುವರಿಯಲಿದೆ.
ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದುವರೆಗೆ 2,956 ಮಂದಿ ಹಕ್ಕು ಚಲಾಯಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮನೆಯಿಂದಲೇ ಮತದಾನ ಮಾಡುವ ಸೌಲಭ್ಯದಡಿ ಪಶ್ಚಿಮ ದೆಹಲಿ ಕ್ಷೇತ್ರದಲ್ಲಿ ಅತೀ ಹೆಚ್ಚು ಮಂದಿ (348 ಮಂದಿ) ಮತದಾನ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.