ಬೆಂಗಳೂರು: ದೇಶದ 102 ಕ್ಷೇತ್ರಗಳಲ್ಲಿ ಇಂದು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಈ ಸಂದರ್ಭದಲ್ಲಿ ಜಾಗತಿಕ ದೈತ್ಯ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.
ಗೂಗಲ್ ವಿಶೇಷ ಸಂದರ್ಭಗಳಲ್ಲಿ ತನ್ನ ಡೂಡಲ್ ಅನ್ನು ಬದಲಾಯಿಸುತ್ತದೆ. ಇಂದು ಕೂಡ ತನ್ನ ಡೂಡಲ್ ಅನ್ನು ಬದಲಾಯಿಸಿದೆ. ಶಾಹಿ ಹಚ್ಚಿದ ತೋರುಬೆರಳಿನ ಚಿತ್ರ ಹಾಕಿದೆ.
21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಮತ ಚಲಾಯಿಸಲು 16.63 ಕೋಟಿಗೂ ಹೆಚ್ಚು ಮಂದಿ ಅರ್ಹತೆ ಪಡೆದಿದ್ದಾರೆ.
ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಿದ್ದು, ಸಂಜೆ 6ಕ್ಕೆ ಮುಕ್ತಾಯವಾಗಲಿದೆ. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಒಂದೆಡೆಯಿಂದ ಇನ್ನೊಂದೆಡೆ ಕರೆದೊಯ್ಯಲು 41 ಹೆಲಿಕಾಪ್ಟರ್‌ಗಳು, 84 ವಿಶೇಷ ರೈಲುಗಳು ಹಾಗೂ ಸರಿಸುಮಾರು ಒಂದು ಲಕ್ಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.