ADVERTISEMENT

ಲೋಕಸಭೆ ಚುನಾವಣೆ: ಮೊದಲ ಹಂತದಲ್ಲಿ ಶೇ 16 ಅಭ್ಯರ್ಥಿಗಳಿಗೆ ಕ್ರಿಮಿನಲ್‌ ನಂಟು

ಪಿಟಿಐ
Published 8 ಏಪ್ರಿಲ್ 2024, 14:22 IST
Last Updated 8 ಏಪ್ರಿಲ್ 2024, 14:22 IST
ಲೋಕಸಭಾ ಚುನಾವಣೆ 
ಲೋಕಸಭಾ ಚುನಾವಣೆ    

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಅಖಾಡ ಸಜ್ಜಾಗಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ 1,625 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಣದಲ್ಲಿರುವ ಪ್ರತಿ 10 ಅಭ್ಯರ್ಥಿಗಳಲ್ಲಿ ಒಬ್ಬರು ಗಂಭೀರ ಕ್ರಿಮಿನಲ್‌ ಪ್ರಕರಣಗಳನ್ನು ಹೊಂದಿದ್ದಾರೆ. ಪ್ರತಿ ಮೂವರಲ್ಲಿ ಒಬ್ಬರು ಕೋಟ್ಯಧಿಪತಿ. ಕಾಂಗ್ರೆಸ್‌ನ ಹಿರಿಯ ನಾಯಕ ಕಮಲನಾಥ್‌ ಪುತ್ರ ನಕುಲ್ ನಾಥ್ ಅತ್ಯಂತ ಶ್ರೀಮಂತ ಉಮೇದುವಾರ.

ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಸೋಮವಾರ ವರದಿ ಪ್ರಕಟಿಸಿದೆ.

ಅಭ್ಯರ್ಥಿಯೊಬ್ಬರು ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದಾರೆ. 10 ಅಭ್ಯರ್ಥಿಗಳು ಯಾವುದೇ ಆಸ್ತಿ ಹೊಂದಿಲ್ಲವೆಂದು ಘೋಷಿಸಿಕೊಂಡಿದ್ದಾರೆ. ಮೊದಲ ಹಂತದ ಮತದಾನ 19 ರಂದು ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.