ADVERTISEMENT

LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ

ಏಜೆನ್ಸೀಸ್
Published 24 ಏಪ್ರಿಲ್ 2024, 13:02 IST
Last Updated 24 ಏಪ್ರಿಲ್ 2024, 13:02 IST
ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಲಾಂಛನಗಳು
ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಲಾಂಛನಗಳು   

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಮುಕ್ತಾಯವಾಗಿದೆ. ನಾಳೆ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಬಹುದು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 12 ರಾಜ್ಯಗಳಲ್ಲಿ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ ಕೇರಳದ 20, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ 8, ಮಹಾರಾಷ್ಟ್ರದ 8, ಮಧ್ಯಪ್ರದೇಶದ 6, ಅಸ್ಸಾಂನ 5 ಲೋಕಸಭಾ ಸ್ಥಾನಗಳು ಸೇರಿದಂತೆ 89 ಕ್ಷೇತ್ರಗಳಿ ಚುನಾವಣೆ ನಡೆಯಲಿದೆ. 

ADVERTISEMENT

ಚುನಾವಣೆ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಭದ್ರತೆಗಾಗಿ ಪೊಲೀಸರು ಹಾಗೂ ಅರೆ ಸೇನಾಪಡೆ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.