ADVERTISEMENT

LS polls | ರಾಯ್‌ಬರೇಲಿಗೆ ಬಘೇಲ್, ಅಮೇಠಿಗೆ ಅಶೋಕ್ ಗೆಹಲೋತ್‌ ವೀಕ್ಷಕರಾಗಿ ನೇಮಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಮೇ 2024, 8:02 IST
Last Updated 6 ಮೇ 2024, 8:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್ ವೀಕ್ಷಕರನ್ನು ನೇಮಕ ಮಾಡಿದೆ.

ರಾಯ್‌ಬರೇಲಿಗೆ ಛತ್ತೀಸಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಹಾಗೂ ಅಮೇಠಿಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಅವರನ್ನು ವೀಕ್ಷಕರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ.

ADVERTISEMENT

ರಾಯ್‌ಬರೇಲಿಯಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಣಕ್ಕಿಳಿದಿದ್ದಾರೆ. ರಾಹುಲ್‌ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ದಿನೇಶ್‌ ಪ್ರತಾಪ್‌ ಸಿಂಗ್‌ ಅವರು ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಸೋನಿಯಾ ಗಾಂಧಿ ವಿರುದ್ಧ ದಿನೇಶ್ ಪ್ರತಾಪ್ ಸಿಂಗ್ ಸೋಲು ಅನುಭವಿಸಿದ್ದರು.

ಅಮೇಠಿ ಲೋಕಸಭಾ ಕ್ಷೇತ್ರದಿಂದ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಶರ್ಮಾ ಕಣಕ್ಕಿಳಿದಿದ್ದಾರೆ. ಕಿಶೋರಿ ಲಾಲ್‌ ಶರ್ಮಾ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸ್ಮೃತಿ ಇರಾನಿ ಅವರು ಸ್ಪರ್ಧಿಸುತ್ತಿದ್ದಾರೆ. ಸ್ಮೃತಿ ಅವರು 2019ರಲ್ಲಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಮಣಿಸಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎರಡೂ ಕ್ಷೇತ್ರಗಳಲ್ಲಿ ಪ್ರಚಾರದ ನೇತೃತ್ವ ವಹಿಸಲಿದ್ದು, ಸೋಮವಾರದಿಂದ ಚುನಾವಣೆ ಮುಗಿಯುವವರೆಗೆ ಕ್ಷೇತ್ರಗಳಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಪ್ರಿಯಾಂಕಾ ಅವರು 250–300 ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದು, ಎರಡೂ ಕ್ಷೇತ್ರಗಳಿಗೆ ಸಮಾನ ಪ್ರಾಧಾನ್ಯತೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.