ADVERTISEMENT

ಅದಾನಿಗೆ ಸಹಾಯ ಮಾಡಲು ಮೋದಿಯನ್ನು ದೇವರು ಕಳುಹಿಸಿದ್ದಾರೆ: ರಾಹುಲ್ ಲೇವಡಿ

ಪಿಟಿಐ
Published 28 ಮೇ 2024, 10:56 IST
Last Updated 28 ಮೇ 2024, 10:56 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ನವದೆಹಲಿ: ದೇಶದ ಜನರ ಸೇವೆ ಮಾಡಲು 'ದೇವರು ನನ್ನನ್ನು ಕಳುಹಿಸಿದ್ದಾರೆ' ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ADVERTISEMENT

'ಬಡವರ ನೆರವಿಗಾಗಿ ಅಲ್ಲ. ಅದಾನಿ ಅವರಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವರು ಕಳುಹಿಸಿದ್ದಾರೆ' ಎಂದು ಟೀಕಿಸಿದ್ದಾರೆ.

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಮೇಲಿನ ಶೇ 50ರಷ್ಟು ಮಿತಿಯನ್ನು ತೆಗೆದು ಹಾಕುತ್ತೇವೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್, 'ಇಂಡಿಯಾ ಮೈತ್ರಿಕೂಟ ಹಾಗೂ ಸಂವಿಧಾನ ಒಂದು ಕಡೆಯಾದರೆ, ಸಂವಿಧಾನವನ್ನು ನಾಶಪಡಿಸಲು ಬಯಸುವವರ ಬಣ ಇನ್ನೊಂದು ಕಡೆಯಾಗಿದೆ' ಎಂದು ಹೇಳಿದ್ದಾರೆ.

'ದಿಲ್, ಜಾನ್ ಔರ್ ಖೂನ್' (ಹೃದಯ, ಪ್ರಾಣ ಹಾಗೂ ರಕ್ತ)ವನ್ನು ನೀಡಿಯಾದರೂ ಸಂವಿಧಾನವನ್ನು ರಕ್ಷಣೆ ಮಾಡುತ್ತೇವೆ' ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

'ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 'ಅಗ್ನಿಪಥ' ಯೋಜನೆಯನ್ನು ಹರಿದು ಕಸದ ಬುಟ್ಟಿಗೆ ಎಸೆಯಲಿದ್ದೇವೆ' ಎಂದು ಸಹ ರಾಹುಲ್ ಪುನರುಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.