ಬೆಂಗಳೂರು: ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ.
ಇದನ್ನು ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ.
'ನಾನು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಹೋಗುತ್ತಿದ್ದೇನೆ. ನಾನು ಇಲ್ಲಿ (ಬೆಂಗಳೂರಿನಲ್ಲಿ) ಎರಡು ದಿನ ಇರುವುದಿಲ್ಲ. ಇಂದು ನಾನು ಹೊರಡುತ್ತೇನೆ. ನನ್ನ ಹುಟ್ಟುಹಬ್ಬವನ್ನು (ಮೇ 15) ಆಚರಿಸಲು ಯಾರೂ ನನ್ನ ನಿವಾಸದ ಬಳಿ ಬರಬಾರದು ಎಂದು ವಿನಂತಿಸಿದ್ದೇನೆ' ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ವಿಪರೀತ ಬರ ಪರಿಸ್ಥಿತಿ ಇರುವುದರಿಂದ ಹುಟ್ಟುಹಬ್ಬವನ್ನು ಆಚರಿಸಿದಂತೆ ಅಭಿಮಾನಿಗಳಿಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ...
ದೇಶದೆಲ್ಲೆಡೆ 'ಇಂಡಿಯಾ' ಮೈತ್ರಿಕೂಟ ಪರ ಉತ್ತಮ ವಾತಾವರಣ ಇದ್ದು, ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ.ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಯನಾಡ್ ಹಾಗೂ ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್ ಕಣಕ್ಕೆ...
ರಾಯ್‌ಬರೇಲಿ ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ಮೇ 20ರಂದು ಮತದಾನ ನಡೆಯಲಿದೆ. 2004ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರದ ಸಂಸದೆಯಾಗಿದ್ದರು. ಕೇರಳದ ವಯನಾಡ್‌ನಿಂದಲೂ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ಅಲ್ಲಿ ಏಪ್ರಿಲ್ 26ರಂದು ಮತದಾನ ನಡೆದಿದೆ. ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.