ಕುಲ್ಲು: ಕೋವಿಡ್ ಲಸಿಕೆ ಪಡೆದ ಜನರು ಸಾಯುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಕೋವಿಡ್ ಲಸಿಕೆ ತಯಾರಕ ಕಂಪನಿಯಿಂದ ₹52 ಕೋಟಿ ದೇಣಿಗೆಯನ್ನು ಪಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.
ಕೋವಿಡ್ ಲಸಿಕೆ ಪಡೆದ ಕೆಲವು ಪ್ರಕರಣಗಳಲ್ಲಿ ಅಡ್ಡಪರಿಣಾಮ ಕಂಡುಬಂದಿತ್ತು. ಈ ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಹಿಮಾಚಲ ಪ್ರದೇಶದ ಕುಲ್ಲು ಪ್ರದೇಶದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಲಸಿಕೆ ತಯಾರಕ ಸಂಸ್ಥೆಯಿಂದ ಬಿಜೆಪಿ ₹52 ಕೋಟಿ ದೇಣಿಗೆ ಪಡೆದಿದೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಬಿಜೆಪಿ ಸರ್ಕಾರ ಹಾನಿ ಮಾಡುತ್ತಿದೆ ಎಂದು ಸಹ ಅವರು ಆರೋಪಿಸಿದ್ದಾರೆ.
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಬಡ ಮಹಿಳೆಯರು ಪ್ರತಿ ತಿಂಗಳು ₹10,000 ಪಡೆಯಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ₹8,500 ಹಾಗೂ ರಾಜ್ಯ ಸರ್ಕಾರವು ₹1,500 ನೀಡಲಿದೆ ಎಂದು ಅವರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.