ADVERTISEMENT

ಮಧ್ಯಪ್ರದೇಶ | ₹1.03 ಕೋಟಿ ನಗದು, 4 ಕೆ.ಜಿ ಬೆಳ್ಳಿ ಆಭರಣ ವಶ

ಪಿಟಿಐ
Published 23 ಏಪ್ರಿಲ್ 2024, 3:09 IST
Last Updated 23 ಏಪ್ರಿಲ್ 2024, 3:09 IST
ನಗದು (ಸಾಂದರ್ಭಿಕ ಚಿತ್ರ)
ನಗದು (ಸಾಂದರ್ಭಿಕ ಚಿತ್ರ)   

ಮಂದ್‌ಸೌರ್: ಮಧ್ಯಪ್ರದೇಶದ ಮಂದ್‌ಸೌರ್ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ವೇಳೆ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹1.03 ಕೋಟಿ ನಗದು 4 ಕೆ.ಜಿ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಕಾರಿನಲ್ಲಿ ಸಂಚರಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕುರಿತು ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫ್ಲೈಯಿಂಗ್ ಸ್ಕ್ವಾಡ್‌ನಿಂದ ವಾಹನಗಳ ತಪಾಸಣೆ ತೀವ್ರಗೊಳಿಸಲಾಗಿದೆ. ಸೋಮವಾರ ತಡರಾತ್ರಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಸೀಟಿನ ಕೆಳಗಡೆ ಸಂಗ್ರಹಿಸಿಟ್ಟಿದ್ದ ನಗದು ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂದ್‌ಸೌರ್‌ನಲ್ಲಿ ನಾಲ್ಕನೇ ಹಂತದಲ್ಲಿ ಮೇ 13ರಂದು ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.