ಕೊಚ್ಚಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಲೋಕಸಭಾ ಚುನಾವಣೆಗೆ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ಗೆ ತನ್ನ ಬೆಂಬಲ ಘೋಷಿಸಿದೆ.
ಆದರೆ, ಎಸ್‌ಡಿಪಿಐ ಜತೆ ಯುಡಿಎಫ್ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು ಸ್ಪಷ್ಟಪಡಿಸಿದ್ದಾರೆ.
‘ಕೇರಳದಲ್ಲಿ ಬಿಜೆಪಿ ವಿರುದ್ಧ ಹೋರಾಡುತ್ತಿರುವ ಕಾಂಗ್ರೆಸ್‌ಗೆ ನಮ್ಮ ಬೆಂಬಲ ಘೋಷಿಸಿದ್ದೇವೆ. ಎಲ್ಲ ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ’ ಎಂದು ಎಸ್‌ಡಿಪಿಐ ಅಧ್ಯಕ್ಷ ಮೂವಾಟ್ಟುಪುಳ ಅಶ್ರಫ್ ಮೌಲವಿ ಸೋಮವಾರ ಮಾಧ್ಯಮಗಳಿಗೆ ತಿಳಿಸಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 18 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.