ADVERTISEMENT

ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ತಡೆಯಿರಿ: ಇ.ಸಿಗೆ ಟಿಎಂಸಿ ಮನವಿ

ಪಿಟಿಐ
Published 14 ಮೇ 2024, 15:54 IST
Last Updated 14 ಮೇ 2024, 15:54 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ನವದೆಹಲಿ: ದೇಶದಲ್ಲಿ ಈಗ ಮಾದರಿ ನೀತಿ ಸಂಹಿತೆಯು ‘ಮೋದಿ ನೀತಿ ಸಂಹಿತೆ’ಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿರುವ ಟಿಎಂಸಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಂದ ನಡೆಯುತ್ತಿರುವ ಚುನಾವಣಾ ನೀತಿ ಸಂಹಿತೆಯ ‘ಘೋರ ಉಲ್ಲಂಘನೆ’ಯನ್ನು ತಡೆಯಬೇಕು ಎಂದು ಚುನಾವಣಾ ಆಯೋಗವನ್ನು (ಇ.ಸಿ) ಮಂಗಳವಾರ ಒತ್ತಾಯಿಸಿದೆ.

ಚುನಾವಣಾ ಆಯೋಗಕ್ಕೆ ಈ ವಿಷಯದ ಬಗ್ಗೆ ಮನವಿಪತ್ರ ಸಲ್ಲಿಸಿದ ನಂತರ ಟಿಎಂಸಿಯ ರಾಜ್ಯಸಭೆ ಸದಸ್ಯರಾದ ಸಾಕೇತ್ ಗೋಖಲೆ ಮತ್ತು ಸಾಗರಿಕಾ ಘೋಷ್‌ ಅವರು, ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಗಳ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಆಯೋಗವು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT