ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್‌ಎಸ್) ಪಕ್ಷದ ನಾಯಕ ರಾಜ್ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು( ಮಂಗಳವಾರ) ಭೇಟಿ ಮಾಡಿ ಮೈತ್ರಿ ಸಂಬಂಧ ಮಾತುಕತೆ ನಡೆಸಿದ್ದಾರೆ.
ದೆಹಲಿಗೆ ಆಗಮಿಸಿದ ಠಾಕ್ರೆ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸಹ ಜತೆಗಿದ್ದರು. ಒಂದು ವೇಳೆ ಮೈತ್ರಿ ಏರ್ಪಟ್ಟರೆ ಮುಂಬೈನಿಂದ ಸ್ಪರ್ಧಿಸಲು ಎಂಎನ್‌ಎಸ್‌ಗೆ ಒಂದು ಸ್ಥಾನವನ್ನು ನೀಡಬಹುದು ಎನ್ನಲಾಗಿದೆ.
ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ರಾಜ್ ಠಾಕ್ರೆ ಅವರು ಶಿವಸೇನೆಯಿಂದ ಹೊರಬಂದು ಎಂಎನ್‌ಎಸ್ ಪಕ್ಷ ಸ್ಥಾಪಿಸಿದರು. ಬಳಿಕ ಅವರು ರಾಜಕೀಯವಾಗಿ ಪ್ರಭಾವ ಬೀರುವಲ್ಲಿ ವಿಫಲರಾದರು.
ಉತ್ತರ ಭಾರತೀಯರ ವಿರುದ್ಧ ರಾಜ್ ಠಾಕ್ರೆ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಯಿತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.