ADVERTISEMENT

ಸೋಲಾಪುರ | ಮೋದಿಯಿಂದ ಸಂವಿಧಾನಕ್ಕೆ ಆಪತ್ತು: ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 15:17 IST
Last Updated 24 ಏಪ್ರಿಲ್ 2024, 15:17 IST
   

ಸೋಲಾಪುರ(ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್, ಬಿಜೆಪಿಯಿಂದ ಸಂವಿಧಾನಕ್ಕೆ ಆಪತ್ತು ಇದೆ.  ಮೋದಿ ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿದ್ದಾರೆ. ಸಂವಿಧಾನ ಉಳಿಸುವ ಸಲುವಾಗಿ ಕಾಂಗ್ರೆಸ್ ಹಾಗೂ ಇಂಡಿಯಾ ಆಘಾಡಿ  ಹೋರಾಟ ಮಾಡುತ್ತಿದೆ ಎಂದು ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಹೇಳಿದರು.

ಸೋಲಾಪುರ ಮರಿಯಾಯಿ ಚೌಕದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಭಾರತದ ಸಂವಿಧಾನ ಬಡವರ ಹಾಗೂ ದೀನ,ದಲಿತರ ಖಡ್ಗವಾಗಿದೆ. ಈ ಖಡ್ಗವನ್ನು ಹದಗೆಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ADVERTISEMENT

ದೇಶದಲ್ಲಿ ನರೇಂದ್ರ ಮೋದಿಯವರ 22 ಆಪ್ತರಲ್ಲಿ ₹ 16 ಲಕ್ಷ ಕೋಟಿ ಧನವಿದೆ. ಈ ಹಣ ದೇಶದ 70 ಕೋಟಿ ಜನರಲ್ಲಿವ ಹಣಕ್ಕೆ ಸಮಾನವಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಮಹಾಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ವರ್ಷ ಪ್ರತಿ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ₹1 ಲಕ್ಷ ಜಮಾ ಮಾಡಲಿದೆ ಎಂದು ಹೇಳಿದರು.

ನರೇಂದ್ರ ಮೋದಿ ದೇಶದಲ್ಲಿ ಕೇವಲ 22 ಶ್ರೀಮಂತ ವ್ಯಕ್ತಿಗಳಿಗೆ ಕೊಟ್ಯಾಧಿಪತಿ ಮಾಡಲು ಶ್ರಮ ಪಟ್ಟಿದ್ದಾರೆ. ಬಡವರಿಗೆ ಬಡವರಾಗಿ ಉಳಿಯಲು ಬಿಟ್ಟಿದ್ದಾರೆ. ಬಡವರ ಸಾಲ ಮನ್ನಾ ಕೂಡ ಮಾಡಲಿಲ್ಲ ಎಂದು ಆರೋಪಿಸಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು ದುಪ್ಪಟ್ಟು ಮಾಡಲಾಗುವುದು ಎಂದು ರಾಹುಲ್ ಆಶ್ವಾಸನೆ ನೀಡಿದರು.

ಸೋಲಾಪುರ ಕಾಂಗ್ರೆಸ್‌ ಅಭ್ಯರ್ಥಿ ಪ್ರಣತಿ ಸಿಂಧೆ, ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್‌ ಕುಮಾರ್‌ ಸಿಂಧೆ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಕಾಂಗ್ರೆಸ್ ಪ್ರದೇಶಾಧ್ಯಕ್ಷ ನಾನಾ ಪಟೋಳೆ, ಮಾಜಿ ಸಚಿವ ಸಿದ್ದರಾಮ ಮೇತ್ರೆ ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.