ADVERTISEMENT

ನರೇಂದ್ರ ಮೋದಿ ಸರ್ಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ: ಚಿದಂಬರಂ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2024, 4:03 IST
Last Updated 5 ಜೂನ್ 2024, 4:03 IST
ಚಿದಂಬರಂ
ಚಿದಂಬರಂ   

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ತನ್ನ ಪಕ್ಷದ ಸೋಲಿಗೆ ಕಾರಣವಾದ ಮೋದಿ ಅವರು ಸರ್ಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದು, ನಾಯಕತ್ವದಿಂದ ಕೆಳಗಿಳಿಯಬೇಕು. ಲೋಕಸಭೆ ಚುನಾವಣೆಯಲ್ಲಿ 303 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿಯು 370 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿತ್ತು. ಆದರೆ, 240 ಸ್ಥಾನಗಳಿಗೆ ಕುಸಿಯುವ ಮೂಲಕ ಹೀನಾಯ ಸೋಲು ಕಂಡಿದೆ’ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ನೇತೃತ್ವದ ಸರ್ಕಾರದಿಂದ ನಿರುದ್ಯೋಗ ಮತ್ತು ಬೆಲೆ ಏರಿಕೆ, ಹಣದುಬ್ಬರದ ಸವಾಲುಗಳನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದೂ ಕಿಡಿಕಾರಿದ್ದಾರೆ.

ADVERTISEMENT

ಲೋಕಸಭೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಜೂನ್‌ 4 (ಮಂಗಳವಾರ) ಫಲಿತಾಂಶ ಹೊರಬಿದ್ದಿದೆ. 543 ಲೋಕಸಭಾ ಸೀಟುಗಳ ಪೈಕಿ 291ರಲ್ಲಿ ಬಿಜೆಪಿ ನೇತೃತ್ವದ ‘ಎನ್‌ಡಿಎ’ ಮೈತ್ರಿಕೂಟ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಬಹುತೇಕ ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.