ADVERTISEMENT

ಆಂಧ್ರ ಪ್ರದೇಶದಲ್ಲಿ ಬಹುಮತದತ್ತ ಟಿಡಿಪಿ–ಜನಸೇನಾ: ಒಡಿಶಾದಲ್ಲಿ ಅರಳುತ್ತಿದೆ ಕಮಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2024, 5:50 IST
Last Updated 4 ಜೂನ್ 2024, 5:50 IST
   

ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೇ ನಡೆದ ಒಡಿಶಾ, ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎರಡೂ ಕಡೆ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಪಡೆದಿವೆ.

ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು ಅಧಿಕಾರದತ್ತ ದಾಪುಗಾಲಿಟ್ಟಿದೆ. ಬೆಳಿಗ್ಗೆ 11 ಗಂಟೆಯ ಹೊತ್ತಿಗೆ 175 ಕ್ಷೇತ್ರಗಳ ಪೈಕಿ 125ರಲ್ಲಿ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ವೈಎಸ್‌ಆರ್‌ಸಿಪಿ ಕೇವಲ 22 ರಲ್ಲಿ ಮಾತ್ರ ಮುನ್ನಡೆ ಪಡೆದಿತ್ತು. ಪುಲಿವೆಂದುಲು ಕ್ಷೇತ್ರದಲ್ಲಿ ಸಿಎಂ ವೈ.ಎಸ್. ಜಗನ್ ಮೋಹನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಗಳ ಪೈಕಿ ಕೆಲವು ಅತಂತ್ರ ವಿಧಾನಸಭೆಯ ಬಗ್ಗೆ ಭವಿಷ್ಯ ನುಡಿದರೆ, ಹೆಚ್ಚಿನ ಸಮೀಕ್ಷೇಗಳು ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸೂಚನೆ ಕೊಟ್ಟಿದ್ದವು.

ADVERTISEMENT

ಇತ್ತ, ಒಡಿಶಾದಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬೆಳಿಗ್ಗೆ 11ರ ಹೊತ್ತಿಗೆ ಬಿಜೆಪಿ 67 ಮತ್ತು ಬಿಜೆಡಿಯ 43 ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದಾರೆ.

147 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಸುಮಾರು 62 ಮತ್ತು ಬಿಜೆಡಿ ಸುಮಾರು 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.