ಹಮೀರ್‌ಪುರ (ಹಿಮಾಚಲ ಪ್ರದೇಶ)(ಪಿಟಿಐ): ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಶೇ 45ರಷ್ಟು ಏರಿಕೆಯಾಗಿರುವಾಗ ಮತ್ತು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಲ್ಲಿ ಸಮಾನ ಫಲಾನುಭವಿಗಳಾಗಿರುವಾಗ ಅವರು ಹೇಗೆ ಅಭದ್ರರಾಗುತ್ತಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶನಿವಾರ ಪ್ರಶ್ನಿಸಿದರು.
ದೇಶದ ಜನಸಂಖ್ಯೆಯಲ್ಲಿ ಮುಸ್ಲಿಮರ ಪ್ರಮಾಣ 1950ರಿಂದ 2015ರ ನಡುವೆ ಶೇ 43ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಹಿಂದೂಗಳ ಪ್ರಮಾಣ ಶೇ 7.8ರಷ್ಟು ಇಳಿಕೆಯಾಗಿದೆ ಎಂದು ಪ್ರಧಾನಿಯ ಆರ್ಥಿಕ ಸಲಹಾ ಸಮಿತಿಯ ಅಧಿಕಾರಿಗಳು ಸಿದ್ಧಪಡಿಸಿರುವ ವರದಿಯಲ್ಲಿ ಹೇಳಿರುವುದನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.
ಅಲ್ಪಸಂಖ್ಯಾತರು ಅಭಿವೃದ್ಧಿ ಹೊಂದುತ್ತಿದ್ದಾರೆ, ಚಿಂತಿಸಬೇಕಾಗಿಲ್ಲ ಎಂದು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದರು.
ಓಲೈಕೆಯ ಮತ್ತು ಮತಬ್ಯಾಂಕ್ ರಾಜಕಾರಣ ಮಾಡುವ ಸಲುವಾಗಿ ಜನರ ಸಂಪತ್ತನ್ನು ಕಸಿದು, ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ಆರೋಪಿಸಿದರು. ಸಂವಿಧಾನದಲ್ಲಿ ಯಾವುದೇ ಬದಲಾವಣೆಯಾಗದು ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.