ನವದೆಹಲಿ: 5ನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಚುನಾವಣೆ ನಡೆಯಲಿದ್ದು, 695 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.
ಒಟ್ಟು 1,586 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 749 ಅಂಗೀಕಾರವಾಗಿವೆ ಎಂದು ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 512 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 301 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಉತ್ತರ ಪ್ರದೇಶದಲ್ಲಿ 466 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 147 ನಾಮಪತ್ರಗಳು ಅಂಗೀಕಾರವಾಗಿವೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.