ಪಣಜಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಹಿಂದೂ ಹೃದಯ ಸಾಮ್ರಾಟ’ನ ವರ್ಚಸ್ಸನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಶುಕ್ರವಾರ ಹೇಳಿದರು.
ಮೊದಲ ಎರಡು ಹಂತದ ಮತದಾನದಲ್ಲಿ ನಿರ್ದಿಷ್ಟ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಕುಸಿದಿರುವುದು, ಬಿಜೆಪಿಯ ಬಗ್ಗೆ ಜನರಿಗಿರುವ ಉದಾಸೀನತೆಗೆ ಸಾಕ್ಷಿಯಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಗುಜರಾತ್ ಮಾದರಿ ಅಭಿವೃದ್ಧಿ, ಭ್ರಷ್ಟಾಚಾರ ವಿರೋಧಿ ನಿಲುವನ್ನು ಮುಂದಿರಿಸಿ 2014ರಲ್ಲಿ ಮೋದಿ ಅವರು ಅಧಿಕಾರಕ್ಕೆ ಬಂದಿದ್ದರು. ಮೊದಲ ಅವಧಿ ಕಳೆದಾಗ ಇವುಗಳಿಗೆ ಪ್ರಸಕ್ತಿ ಇಲ್ಲದಾಯಿತು. 2019ರಲ್ಲಿ ಪುಲ್ವಾಮಾ ದಾಳಿಯನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.