ADVERTISEMENT

ಪ್ರಧಾನಿ ನರೇಂದ್ರ ಮೋದಿಗೆ ಚರಿತ್ರೆಯ ಅರಿವು ಇಲ್ಲ: ಕಾಂಗ್ರೆಸ್

ಪಿಟಿಐ
Published 6 ಏಪ್ರಿಲ್ 2024, 9:59 IST
Last Updated 6 ಏಪ್ರಿಲ್ 2024, 9:59 IST
<div class="paragraphs"><p>ಜೈರಾಮ್ ರಮೇಶ್</p></div>

ಜೈರಾಮ್ ರಮೇಶ್

   

(ಪಿಟಿಐ ಚಿತ್ರ)

ನವದೆಹಲಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚರಿತ್ರೆಯ ಅರಿವು ಇಲ್ಲ. 1940ರ ದಶಕದ ಆರಂಭದಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಅವರೇ ಬಂಗಾಳದಲ್ಲಿ ಮುಸ್ಲಿಂ ಲೀಗ್ ಜೊತೆ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು ಎಂದು ಹೇಳಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 'ಪ್ರಧಾನಿ ಅವರಿಗೆ ಚರಿತ್ರೆಯ ಅರಿವು ಇಲ್ಲ. ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದ ಮುಖರ್ಜಿ, ಬಂಗಾಳದಲ್ಲಿ ಮುಸ್ಲಿಂ ಲೀಗ್ ಜೊತೆಗಿನ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು. ಸಿಂಧ್ ಹಾಗೂ ವಾಯುವ್ಯ ಪ್ರದೇಶದಲ್ಲೂ ಮುಸ್ಲಿಂ ಲೀಗ್ ಜೊತೆ ಹಿಂದೂ ಮಹಾಸಭಾ ಹೊಂದಾಣಿಕೆ ಮಾಡಿಕೊಂಡಿತ್ತು' ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅಲ್ಲ. ಬಿಜೆಪಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು.

ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಪ್ರಣಾಳಿಕೆಗೆ ನ್ಯಾಯ ಪತ್ರ ಎಂದು ಹೆಸರಿಟ್ಟಿರುವ ಕಾಂಗ್ರೆಸ್‌, 25 ಗ್ಯಾರಂಟಿಗಳನ್ನು ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.