ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಭಾಷಣ ಬರೆಯುವವರೊಬ್ಬರು ಬರೆದ ಕಾಂಗ್ರೆಸ್ ಪ್ರಣಾಳಿಕೆ ಕಲ್ಪಿಸಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ನಿಜವಾದ ಅಂಶಗಳ ಬಗ್ಗೆ ಚರ್ಚೆ ನಡೆಸಲಿ ಎಂದು ಪಕ್ಷದ ನಾಯಕ ಪಿ.ಚಿದಂಬರಂ ಭಾನುವಾರ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಆಸ್ತಿ ಹಂಚಿಕೆ ಮತ್ತು ಪಿತ್ರಾರ್ಜಿತ ಆಸ್ತಿ ತೆರಿಗೆಗೆ ಸಂಬಂಧಿಸಿದ ಕಾಂಗ್ರೆಸ್ ಪ್ರಣಾಳಿಕೆಯನ್ನು ಟೀಕಿಸಿದ ಬಗ್ಗೆ ಚಿದಂಬರಂ ‘ಎಕ್ಸ್’ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಅವರು ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು.
‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ಪದಗಳನ್ನು, ವಾಕ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಕಂಡುಹಿಡಿಯುತ್ತಿದ್ದಾರೆ. ಪಿತ್ರಾರ್ಜಿತ ಆಸ್ತಿ ತೆರಿಗೆ ಎನ್ನುವ ಪದ ಪ್ರಣಾಳಿಕೆಯಲ್ಲಿ ಎಲ್ಲೂ ಇಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.