ADVERTISEMENT

ಮೀಸಲಾತಿ ಮಿತಿ ಹೆಚ್ಚಳ ವಿಚಾರದಲ್ಲಿ ಮೋದಿ ನಿಲುವೇನು?: ಕಾಂಗ್ರೆಸ್

ಪಿಟಿಐ
Published 1 ಮೇ 2024, 14:23 IST
Last Updated 1 ಮೇ 2024, 14:23 IST
ಜೈರಾಮ್ ರಮೇಶ್
ಜೈರಾಮ್ ರಮೇಶ್   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ಜಾತಿಗಳ ಮೀಸಲಾತಿಯ ಶೇ 50ರ ಮಿತಿಯನ್ನು ತೆಗೆದುಹಾಕುವ ಸಂಬಂಧ ತಮ್ಮ ನಿಲುವೇನು ಎನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಬುಧವಾರ ಪ್ರಶ್ನಿಸಿದೆ.

ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವುದರಿಂದ ಸಂವಿಧಾನ ಬದಲಿಸುವ ಅವಕಾಶ ಪಡೆಯಲು 400ಕ್ಕೂ ಹೆಚ್ಚು ಸ್ಥಾನ ಗಳಿಸುವ ಬಗ್ಗೆ ಮಾತನಾಡುತ್ತಿವೆ’ ಎಂದು ಆರೋಪಿಸಿದರು.

ತಮ್ಮ ಆರೋಪಕ್ಕೆ ಪೂರಕವಾಗಿ ಜೈರಾಮ್ ರಮೇಶ್ ಅವರು ಆರ್‌ಎಸ್‌ಎಸ್‌ ಮುಖವಾಣಿ ‘ಆರ್ಗನೈಸರ್’ನಲ್ಲಿ ಪ್ರಕಟವಾಗಿದ್ದ ಲೇಖನ ಸೇರಿದಂತೆ ಮನುಸ್ಮೃತಿ, ಆರ್‌ಎಸ್‌ಎಸ್‌ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

ADVERTISEMENT

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಮೀಸಲಾತಿಯ ಶೇ 50ರ ಮಿತಿಯನ್ನು ಹೆಚ್ಚಿಸಲು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಗ್ಯಾರಂಟಿ ನೀಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.