ADVERTISEMENT

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: SP ನಾಯಕ ಶಿವಪಾಲ್ ಯಾದವ್ ವಿರುದ್ಧ ದೂರು

ಪಿಟಿಐ
Published 6 ಮೇ 2024, 5:30 IST
Last Updated 6 ಮೇ 2024, 5:30 IST
<div class="paragraphs"><p>ಶಿವಪಾಲ್ ಯಾದವ್ ಮತ್ತು&nbsp;ಮಾಯಾವತಿ</p></div>

ಶಿವಪಾಲ್ ಯಾದವ್ ಮತ್ತು ಮಾಯಾವತಿ

   

ಬದೌನ್‌ (ಉತ್ತರ ಪ್ರದೇಶ): ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಿವಪಾಲ್ ಯಾದವ್ ವಿರುದ್ಧ ಬಿಎಸ್‌ಪಿ ನಾಯಕ ರಾಮ್ ಪ್ರಕಾಶ್ ತ್ಯಾಗಿ ನೀಡಿದ ದೂರಿನ ಮೇರೆಗೆ ಭಾನುವಾರ ರಾತ್ರಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮೇ 3ರಂದು ಯಾದವ್ ಅವರು ಮಾಯಾವತಿ ವಿರುದ್ಧ ಅಸಭ್ಯ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರು ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ತ್ಯಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದ ಬದೌನ್‌ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷವು ಮೊದಲಿಗೆ ಮಾಜಿ ಸಂಸದ ಹಾಗೂ ಅಖಿಲೇಶ್‌ ಯಾದವ್‌ ಅವರ ಸೋದರ ಸಂಬಂಧಿ ಧರ್ಮೇಂದ್ರ ಯಾದವ್‌ ಅವರನ್ನು ಕಣಕ್ಕಿಳಿಸಿತ್ತು. ಕೆಲವು ದಿನಗಳ ನಂತರ ಪಕ್ಷದ ಹಿರಿಯ ನಾಯಕ ಶಿವಪಾಲ್‌ ಯಾದವ್‌ ಸ್ಪರ್ಧಿಸಲಿದೆ ಎಂದು ಪಕ್ಷ ಪ್ರಕಟಿಸಿತ್ತು. ಶಿವಪಾಲ್‌ ಪುತ್ರ ಆದಿತ್ಯ ಯಾದವ್‌ ಹುರಿಯಾಳುವಾಗಲಿದ್ದಾರೆ ಎಂದು ಏಪ್ರಿಲ್‌ 14ರಂದು ಘೋಷಿಸಿತ್ತು.

ಬದೌನ್‌ ಲೋಕಸಭಾ ಕ್ಷೇತ್ರದಲ್ಲಿ ಮೇ 7 (ಮಂಗಳವಾರ) ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.