ADVERTISEMENT

ನಾನು ಬದುಕಿರುವವರೆಗೆ ಸಂವಿಧಾನ ಬದಲಾವಣೆಗೆ ಅವಕಾಶ ಕೊಡಲ್ಲ; ಪ್ರಧಾನಿ ಮೋದಿ

ಪಿಟಿಐ
Published 29 ಏಪ್ರಿಲ್ 2024, 13:45 IST
Last Updated 29 ಏಪ್ರಿಲ್ 2024, 13:45 IST
<div class="paragraphs"><p>ಪ್ರಧಾನಿ ಮೋದಿ&nbsp;</p></div>

ಪ್ರಧಾನಿ ಮೋದಿ 

   

ಪಿಟಿಐ ಚಿತ್ರ

ಸಾತಾರ ( ಮಹಾರಾಷ್ಟ್ರ): ನಾನು ಜೀವಂತ ಇರುವವರೆಗೂ ಸಂವಿಧಾನ ಬದಲಾವಣೆ ಹಾಗೂ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ADVERTISEMENT

ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣದಿಂದಾಗಿ ಕಾಶ್ಮೀರದಲ್ಲಿ ದಲಿತರು ಮೀಸಲಾತಿ ಕೋಟಾದಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ರಾಜಕೀಯ ಪ್ರತಿಸ್ಪರ್ಧಿಗಳು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಡುತ್ತಿದ್ದಾರೆ ಎಂದು ದೂರಿದ್ದಾರೆ.

ಎಐ ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವುದರ ಬಗ್ಗೆ ನಿಮ್ಮ(ಜನರು) ಗಮನಕ್ಕೆ ಬಂದರೆ ತಕ್ಷಣವೇ ಅಂತಹ ವಿಡಿಯೊಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಎಂದು ಮೋದಿ ಮನವಿ ಮಾಡಿದ್ದಾರೆ.

ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ನಕಲಿ ವಿಡಿಯೊಗಳನ್ನು ಸೃಷ್ಟಿಸಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಾರೆ. ಇಂತಹ ಘಟನೆಗಳಿಂದ ಸಮಾಜವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.