ADVERTISEMENT

ಕೇಂದ್ರ ಸಂಪುಟ ಸಭೆ; ಹೊಸ ಸರ್ಕಾರ ರಚನೆಗೆ ನಿರ್ಧಾರ ಸಾಧ್ಯತೆ

ಪಿಟಿಐ
Published 5 ಜೂನ್ 2024, 4:23 IST
Last Updated 5 ಜೂನ್ 2024, 4:23 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಕೇಂದ್ರ ಸಂಪುಟ ಸಭೆ ನಡೆಯಲಿದೆ.

ADVERTISEMENT

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ಈಗಿನ ಲೋಕಸಭೆ ವಿಸರ್ಜಿಸಿ ಹೊಸ ಸರ್ಕಾರದ ರಚನೆಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಬೆಳಿಗ್ಗೆ 11.30ಕ್ಕೆ ಪ್ರಧಾನಿ ಅವರ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಸಂಪುಟ ಸಭೆ ನಡೆಯಲಿದೆ. 17ನೇ ಲೋಕಸಭೆಯ ಅವಧಿಯು ಜೂನ್ 16ರಂದು ಅಧಿಕೃತವಾಗಿ ಕೊನೆಗೊಳ್ಳಲಿದೆ.

ಮತ್ತೊಂದೆಡೆ ಇಂದೇ 'ಇಂಡಿಯಾ' ಮೈತ್ರಿಕೂಟದ ಸಭೆ ನಡೆಯಲಿದ್ದು, ಮುಂದಿನ ಕಾರ್ಯತಂತ್ರ ಹಾಗೂ ಸರ್ಕಾರ ರಚಿಸುವ ಸಾಧ್ಯತೆ ಕುರಿತು ಮಾತುಕತೆ ನಡೆಸುವ ಸಾಧ್ಯತೆಯಿದೆ.

543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ 'ಇಂಡಿಯಾ' ಮೈತ್ರಿಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.