ಹಮೀರ್‌ಪುರ/ ಶಿಮ್ಲಾ (ಹಿಮಾಚಲ ಪ್ರದೇಶ): ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಸುಲ್ತಾನ್‌ಪುರಿ ಅವರು ಕ್ರಮವಾಗಿ ಹಮೀರ್‌ಪುರ ಹಾಗೂ ಶಿಮ್ಲಾ ಲೋಕಸಭಾ ಕ್ಷೇತ್ರಗಳಿಂದ ಸೋಮವಾರ ನಾಮಪತ್ರ ಸಲ್ಲಿಸಿದರು.
ಅನುರಾಗ್ ನಾಮಪತ್ರ ಸಲ್ಲಿಸುವಾಗ ಅವರ ಸಹೋದರ, ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯಸ್ಥ ಅರುಣ್ ಧುಮಾಲ್ ಹಾಗೂ ಬಿಜೆಪಿ ಮುಖಂಡರು ಜತೆಗಿದ್ದರು. ಅನುರಾಗ್ ಅವರು ಹಿಮಾಚಲ ಪ್ರದೇಶದ ಹಮೀರ್‌ಪುರ ಕ್ಷೇತ್ರದಿಂದ ಐದನೇ ಬಾರಿ ಅಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಅವಾಹದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರಲ್ಲದೆ, ಹಲವು ಕಡೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರು.
ಕಾಂಗ್ರೆಸ್ ಪಕ್ಷವು ಅನುರಾಗ್ ವಿರುದ್ಧ ಉನಾ ಕ್ಷೇತ್ರದ ಮಾಜಿ ಶಾಸಕ ಸತ್ಪಾಲ್ ರಾಯಜಾದಾ ಅವರನ್ನು ಕಣಕ್ಕಿಳಿಸಿದೆ.
ಶಿಮ್ಲಾದಲ್ಲಿ ಹಾಲಿ ಸಂಸದ ಕಾಂಗ್ರೆಸ್‌ನ ವಿನೋದ್ ಸುಲ್ತಾನ್‌ಪುರಿ ಅವರು ನಾಮಪತ್ರ ಸಲ್ಲಿಸುವಾಗ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಪ್ರತಿಭಾ ಸಿಂಗ್ ಮತ್ತು ಸಚಿವ ಹರ್ಷವರ್ಧನ್ ಚೌಹಾಣ್ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.