ADVERTISEMENT

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2023, 15:19 IST
Last Updated 16 ಏಪ್ರಿಲ್ 2023, 15:19 IST
   

ಶಿರಸಿ: ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದು ವಿಧಾನಸಭೆ ಪ್ರವೇಶಿಸಿದ್ದ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಭಾನುವಾರ ರಾತ್ರಿ 8.30ರ ಸುಮಾರಿಗೆ ಶಿರಸಿಯಲ್ಲಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದರು.

ನಂತರ ಕಾಗೇರಿ ಜೊತೆ ಮಾತುಕತೆ ನಡೆಸಿದ ಅಖಂಡ ಅವರಿಗೆ ಬಿಜೆಪಿಗೆ ಬರುವಂತೆ ಕಾಗೇರಿ ಅವರು ಆಹ್ವಾನ ನೀಡಿದರು. ಇದಕ್ಕೆ ಪ್ರತಿಕಿಯಿಸಿದ ಅಖಂಡ ಶ್ರೀನಿವಾಸಮೂರ್ತಿ, ಕ್ಷೇತ್ರದ ಜನರ ಬಳಿ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದರು.

ಓದಿ...

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.