ADVERTISEMENT

ಆರ್‌. ಅಶೋಕಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 16:06 IST
Last Updated 29 ಮಾರ್ಚ್ 2024, 16:06 IST
ಆರ್‌. ಅಶೋಕ
ಆರ್‌. ಅಶೋಕ   

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಸ್ತವಾರಿಯಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರನ್ನು ನೇಮಿಸಲಾಗಿದೆ. 

ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡ ತಕ್ಷಣ ಅವರು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ಜತೆ ಚುನಾವಣಾ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.  

ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ. ದೇವೇಗೌಡರ ಅಳಿಯರಾದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ ಅವರು ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ, ಹಾಲಿ ಸಂಸದ ಡಿ.ಕೆ. ಸುರೇಶ್‌ ಮರು ಆಯ್ಕೆ ಬಯಸಿ ಕಣಕ್ಕೆ ಇಳಿದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.