ADVERTISEMENT

ಕ್ಷೇತ್ರದಲ್ಲಿ ನಾಲ್ಕನೇ ಸಲ ಗೆಲುವು ಖಚಿತ : ಎಂ.ಪಿ ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2023, 9:14 IST
Last Updated 21 ಏಪ್ರಿಲ್ 2023, 9:14 IST
ಹೊನ್ನಾಳಿಯ ಹಿರೇಮಠ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಸೇರಿದ್ದ ಜನರು.
ಹೊನ್ನಾಳಿಯ ಹಿರೇಮಠ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಸೇರಿದ್ದ ಜನರು.   

ಹೊನ್ನಾಳಿ: ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಬಾರಿಗೆ ನನ್ನ ಗೆಲುವು ಶತಸಿದ್ಧ. 40,000ದಿಂದ 50,000 ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಅವರಿಗೆ ಗುರುವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾರ್ಯಕರ್ತರು ನನ್ನ ಶಕ್ತಿ. ಆದಕಾರಣ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಲು ಸಾಧ್ಯವಾಯಿತು. ಜನಸೇವಕರನ್ನು ಕ್ಷೇತ್ರದ ಜನರು ಯಾವತ್ತೂ ಕೈ ಬಿಟ್ಟಿಲ್ಲ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸೇರಿದ್ದ ಜನಸಮೂಹವೇ ಇದಕ್ಕೆ ಸಾಕ್ಷಿ ಎಂದರು.

ADVERTISEMENT

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ಶಾಸಕ ರೇಣುಕಾಚಾರ್ಯ ನಿಜವಾದ ಜನಪ್ರತಿನಿಧಿಯಾಗಿ ಹೊರ ಹೊಮ್ಮಿದ್ದಾರೆ. ಇದು ನಾಮಪತ್ರ ಸಲ್ಲಿಕೆ ವೇಳೆ ಸೇರಿದ್ದ ಜನಸಮೂಹದಿಂದ ಖಚಿತವಾಗಿದೆ. ರೇಣುಕಾಚಾರ್ಯ ಅವರು ಫಲಿತಾಂಶಕ್ಕಾಗಿ ಕಾಯುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಬಿಜೆಪಿ 130ರಿಂದ 140 ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಜೆ.ಕೆ. ಸುರೇಶ್, ಅರಕೆರೆ ನಾಗರಾಜ್, ಎ.ಬಿ. ಹನುಮಂತಪ್ಪ, ಕೆ.ಪಿ. ಕುಬೇರಪ್ಪ, ಶಾಂತರಾಜ್‍ ಪಾಟೀಲ್, ಸುರೇಂದ್ರನಾಯ್ಕ, ಮಾರುತಿನಾಯ್ಕ, ಸಿ.ಆರ್. ಶಿವಾನಂದ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.