ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
ಬಂಟ್ಸ್ ಹಾಸ್ಟೆಲ್ ಸರ್ಕಲ್ ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಚೆಂಡೆ, ಬ್ಯಾಂಡ್ ವಾದ್ಯದೊಂದಿಗೆ ಹೊರಟ ಮೆರವಣಿಗೆಯು ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಮಾರ್ಗವಾಗಿ ಪುರಭವನದ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆ ಹೊರಡುವ ಪೂರ್ವದಲ್ಲಿ ವಂದೇ ಮಾತರಂ ಗೀತೆ ಹಾಡಲಾಯಿತು.
ಭಾರತ ಮಾತೆಯ ಚಿತ್ರ ಇರುವ ವಾಹನದ ಜೊತೆಗೆ ಕಾರ್ಯಕರ್ತರು ಹೆಜ್ಜೆ ಹಾಕಿದರು.
ತೆರೆದ ವಾಹನದಲ್ಲಿ ಸಾಗಿದ ಬೃಜೇಶ್ ಚೌಟ ಅವರ ಜೊತೆ ಪಕ್ಷದ ಪ್ರಮುಖ ರಾದ ಸುನಿಲ್ ಕುಮಾರ್, ಸಿ.ಟಿ. ರವಿ, ಸಂಸದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.
ಮೆರವಣಿಗೆ ಹೊರಡುವ ಪೂರ್ವದಲ್ಲಿ ಬೃಜೇಶ್ ಚೌಟ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಹಾರಾಡಿದ ತುಳುನಾಡ ಧ್ವಜ: ಮೆರವಣಿಗೆಯುದ್ದಕ್ಕೂ ಬಿಜೆಪಿ ಧ್ಚಜದೊಂದಿಗೆ ಜೆಡಿಎಸ್ ಧ್ವಜವೂ ಹಾರಾಡಿತು. ತುಳುನಾಡಿನ ಧ್ವಜವೂ ಹಾರಾಡಿದ್ದು ವಿಶೇಷವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.