ADVERTISEMENT

ಶೋಭಾ ಕರಂದ್ಲಾಜೆ ವಿರುದ್ಧ ಡಿಎಂಕೆ ದೂರು: ಶೀಘ್ರ ಕ್ರಮಕ್ಕೆ ಚು. ಆಯೋಗ ಸೂಚನೆ

ಪಿಟಿಐ
Published 20 ಮಾರ್ಚ್ 2024, 14:35 IST
Last Updated 20 ಮಾರ್ಚ್ 2024, 14:35 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ನವದೆಹಲಿ: ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಡಿಎಂಕೆ ನೀಡಿರುವ ದೂರಿನನ್ವಯ ಶೀಘ್ರ ಮತ್ತು ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗೆ ಕೇಂದ್ರದ ಚುನಾವಣಾ ಆಯೋಗ ಸೂಚಿಸಿದೆ.

48 ಗಂಟೆಗಳಲ್ಲಿ ಈ ಕುರಿತಂತೆ ವರದಿ ನೀಡುವಂತೆಯೂ ಆಯೋಗ ಸೂಚಿಸಿದೆ.

ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟದ ಆರೋಪಿ ತಮಿಳುನಾಡು ಮೂಲದವನು ಎಂದು ಶೋಭಾ ನೀಡಿದ್ದ ಹೇಳಿಕೆ ವಿರುದ್ಧ ಕ್ರಮಕ್ಕೆ ಡಿಎಂಕೆ ಒತ್ತಾಯಿಸಿತ್ತು..

ADVERTISEMENT

ಶೋಭಾ ಕರಂದ್ಲಾಜೆ ಅವರ ಹೇಳಿಕೆ ತಮಿಳುನಾಡು ಜನರನ್ನು ಉಗ್ರಗಾಮಿ ಗಳು ಎಂದು ಬಿಂಬಿಸುವಂತೆ ಇದೆ ಎಂದು ದೂರಿತ್ತು.

ಶನಿವಾರ ಪ್ರತಿಭಟನೆ ವೇಳೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತಮಿಳುನಾಡಿನಿಂದ ಬಂದವರು ಬಾಂಬ್ ಇಡುತ್ತಿದ್ದಾರೆ. ದೆಹಲಿಯಿಂದ ಬಂದವರು ಪಾಕಿಸ್ತಾನ್ ಜಿಂದಾಬಾದ್ ಎನ್ನುತ್ತಿದ್ದಾರೆ. ಕೇರಳದಿಂದ ಬಂದವರು ಆ್ಯಸಿಡ್ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.

ವಿಭಿನ್ನ ಸಮೂಹಗಳ ನಡುವೆ ದ್ವೇಷ ಮೂಡಿಸುವ ಯತ್ನ ಆರೋಪದಡಿ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೋಭಾ ಹೇಳಿಕೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಡಿಎಂಕೆ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.