ADVERTISEMENT

ಸಿಎಂ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ: ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 1 ಮೇ 2024, 11:08 IST
Last Updated 1 ಮೇ 2024, 11:08 IST
<div class="paragraphs"><p>&nbsp;ಆರ್. ಅಶೋಕ</p></div>

 ಆರ್. ಅಶೋಕ

   

ಬೆಂಗಳೂರು: ಪ್ರಜ್ವಲ್‌ ಪ್ರಕರಣವನ್ನು ಪಕ್ಷ ಬೆಂಬಲಿಸುವುದಿಲ್ಲ. ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.

ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಬಿಂಬಿಸಿಕೊಂಡು 2019ರ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು, ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ. ತಮ್ಮ ವೈಫಲ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ? ರಾಜ್ಯ ಸರ್ಕಾರಕ್ಕೆ ಪೊಲೀಸರ ಮೇಲೆ ಹಿಡಿತ ಇಲ್ಲ ಎಂದು ಆರೋಪಿಸಿದರು.

ADVERTISEMENT

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಬಿಜೆಪಿ–ಜೆಡಿಎಸ್‌ ಮೈತ್ರಿಯಿಂದಾಗಿ ಮೂರು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಬಿಟ್ಟುಕೊಟ್ಟ ಕ್ಷೇತ್ರಗಳಲ್ಲಿ ಯಾರು ಸ್ಪರ್ಧಿಸಬೇಕು ಎಂದು ಬಿಜೆಪಿ ತೀರ್ಮಾನಿಸುವುದಿಲ್ಲ ಎಂದರು.

ಬಾರದ ಹಾಲಿನ ಪ್ರೋತ್ಸಾಹಧನ: ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ.ಸುಮಾರು ₹700 ಕೋಟಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ನೀಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.